ಟಾಪ್ 10 ನ್ಯೂಸ್
ಕೆಮಿಕಲ್ ಕಾರ್ಖಾನೆಯ ಬಾಯ್ಲರ್ ಸ್ಫೋಟ ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರ.
ಮಹಾರಾಷ್ಟ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ನಾಲ್ಕು ಬಾಯ್ಲರ್ ಗಳು ಸ್ಫೋಟಗೊಂಡ ಪರಿಣಾಮ ಭಾರೀ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮುಂಬೈನ ಥಾಣೆಯ ಡೊಂಬಿವಾಲಿಯದಲ್ಲಿ ಮೇ 23ರಂದು ನಡೆದಿದೆ.
ಈ ಘಟನೆಯಲ್ಲಿ ಅನೇಕ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.
ಇನ್ನೂ ಹಲವರು ಕಾಖಾ೯ನೆ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಎಂಐಡಿಸಿ ಪ್ರದೇಶದ 2ನೇ ಹಂತದ ಅಂಬರ್ ಎಂಬ ಕೆಮಿಕಲ್ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು. ಸದ್ಯದ ಮಾಹಿತಿ ಪ್ರಕಾರ ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
Post a comment
Log in to write reviews