
ಬಾಲಿವುಡ್ ನಟಿ ಮಲೈಕಾ ಆರೋರ ತಂದೆ ಅನಿಲ್ ಆರೋರಾ ಇಂದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಮುಬೈನ ತಮ್ಮ ಮನೆಯ ಮೇಲ್ಚಾವಣಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಲೈಕಾರ ತಂದೆ ಮುಂಬೈನ ಬಾಂದ್ರಾದಲ್ಲಿ ವಾಸವಿದ್ದರು. ಅವರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು.
ಮಲೈಕಾ ಅರೋರಾ ಚಿತ್ರೀಕರಣಕ್ಕಾಗಿ ಪುನಾಕ್ಕೆ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ಮುಂಬೈಗೆ ಬಂದಿದ್ದಾರೆ ಮಲೈಕಾ ಅರೋರಾರ ಸಹೋದರಿ ಅಮೃತ್ ಅರೋರಾ ಸಹ ತಂದೆಯ ಸಾವಿನ ವಿಷಯ ತಿಳಿದು ಮುಂಬೈಗೆ ವಾಪಸ್ಸಾಗಿದ್ದಾರೆ. ಮಲೈಕಾ ಅರೋರಾರ ತಂದೆ ಅನಿಲ್ ಅರೋರಾ ಭಾರತದ ಮರ್ಚೆಂಟ್ ನೇವಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
ಅನಿಲ್ ಅರೋರಾರ ಮೃತ ದೇಹವನ್ನು ಮುಂಬೈನ ಬಾಬಾ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಸಂಬಂಧಿಗಳಿಗೆ ನೀಡಲಾಗುವುದೆಂದು ತಿಳಿಸಲಾಗಿದೆ. ಅನಿಲ್ ಅವರದ್ದು ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದರೋ ಎಂಬ ಬಗ್ಗೆ ಅನುಮಾನವಿರುವುದಾಗಿ ಪೊಲೀಸರು ಹೇಳಿದ್ದಾರೆ. ಅನಿಲ್ ಅರೋರಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಲೈಕಾ ಅರೋರಾರ ಮಾಜಿ ಪತಿ, ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್, ಮಲೈಕಾರ ಬಾಂದ್ರಾದ ಮನೆಗೆ ಆಗಮಿಸಿದ್ದಾರೆ.
Poll (Public Option)

Post a comment
Log in to write reviews