
ಮುಂಬೈ: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ತಂದೆ ಖ್ಯಾತ ಬರಹಗಾರ ಸಲೀಂ ಖಾನ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ಮುಂಬೈ ನಗರದ ಬಾಂದ್ರಾದ ಬೆಳಗ್ಗಿನ ವಾಕಿಂಗ್‌ಗೆ ತೆರಳುತ್ತಿದ್ದಾಗ ಅಪರಿಚಿತರಿಬ್ಬರು ಸಲೀಂ ಖಾನ್‌ಗೆ ಬೆದರಿಕೆ ಪತ್ರ ನೀಡಿದ್ದು, ಇದೀಗ ಅವರನ್ನು ಬಂಧನ ಮಾಡಲಾಗಿದೆ.
ವಾಕಿಂಗ್ ತೆರಳುತ್ತಿದ್ದಾಗ ಓರ್ವ ಮತ್ತು ಬುರ್ಖಾ ಧರಿಸಿದ ಮಹಿಳೆಯೊಬ್ಬರು ಬೆದರಿಕೆ ಪತ್ರ ನೀಡಿದ್ದಾರೆ. ‘ಲಾರೆನ್ಸ್ ಬಿಷ್ಣೋಯ್‌ರನ್ನು ಕಳುಹಿಸಬೇಕೇ’ ಎಂದು ಪತ್ರದಲ್ಲಿ ಬರೆಯಲಾಗಿದ್ದು, ತಕ್ಷಣವೇ ಬೆದರಿಕೆ ಹಾಕಿದವರ ವಿರುದ್ಧ ದೂರು ದಾಖಲಿಸಲಾಗಿತ್ತು. ಇದೀಗ ಬೆದರಿಕೆ ಪತ್ರ ನೀಡಿದ್ದ ಇಬ್ಬರನ್ನು ಮುಂಬೈ ಬಾಂದ್ರಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Poll (Public Option)

Post a comment
Log in to write reviews