
ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ.
ನವದೆಹಲಿ : ಮೇ. 28 ಮಂಗಳವಾರ ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ 5.35ಕ್ಕೆ ವಿಮಾನ ದೆಹಲಿಯಿಂದ ಟೇಕ್ ಆಫ್ ಆಗಬೇಕಿತ್ತು. ಬಾಂಬ್ ಬೆದರಿ ಕೆರೆ ಬಂದ ಕೂಡಲೆ ಎಲ್ಲಾ ಪ್ರಯಾಣಿಕರನ್ನು ತುರ್ತು ದ್ವಾರದ ಮೂಲಕ ಸ್ಥಳಾಂತರಿಸಲಾಗಿದೆ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ. ಪ್ರಸ್ತುತ ವಿಮಾನವನ್ನುಪರಿಶೀಲಿಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಪ್ರಸ್ತುತ ಸ್ಥಳದಲ್ಲಿದೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews