
ಕೇರಳ: ಕೇರಳದ ಕೊಚ್ಚಿಯಿಂದ ಲಂಡನ್‌ಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನಕ್ಕೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಬಂದಿದೆ.
ಬೆದರಿಕೆ ಕರೆ ಮಾಡಿದ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದು, ಇದರ ಬಗ್ಗೆ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ವಿಮಾನದ ಮೇಲೆ ವ್ಯಾಪಕ ತಪಾಸಣೆ ನಡೆಸಿದ್ದು, ಯಾವುದೇ ಅಪಾಯಕಾರಿ ವಸ್ತುಗಳು ಕಂಡುಬಂದಿಲ್ಲ. ಇದರ ಜಾಡು ಹಿಡಿದ ಪೊಲೀಸರಿಗೆ ಮಲಪ್ಪುರಂ ಜಿಲ್ಲೆಯ ಕೊಂಡೊಟ್ಟಿ ಮೂಲದ ಸುಹೈಬ್ ಬೆದರಿಕೆ ಕರೆ ಮಾಡಿರುವುದಾಗಿ ತಿಳಿದು ಬಂದಿದೆ. ಕೂಡಲೇ ಅವನನ್ನು ಪೊಲೀಸರು ಬಂಧಿಸಿದ್ದಾರೆ.
Poll (Public Option)

Post a comment
Log in to write reviews