
ಕಳೆದ ದಿನಗಳಷ್ಟೇ ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ ಹಾಗೂ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಇನ್ನೂ ಈ ಘಟನೆ ಮಾಸುವ ಮುನ್ನವೇ ಇದೀಗ ನಗರದ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಂಎಸ್ ಕಾಲೇಜು, ಹಾಗೂ ವಿ.ವಿ.ಪುರಂನಲ್ಲಿರುವ ಬಿಐಟಿ ಕಾಲೇಜು ಸೇರಿದಂತೆ ಕೆಲವು ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದೆ.
ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕಿಯ ಸಿಬ್ಬಂದಿ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಮುಂಜಾಗೃತ ಕ್ರಮವಾಗಿ ಪೊಲೀಸರು ಮೂರು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಹೊರಕ್ಕೆ ಕಳುಹಿಸಿದ್ದಾರೆ. ಸದ್ಯ ಪರಿಶೀಲನೆ ಮುಂದುವರೆದಿದೆ.
Poll (Public Option)

Post a comment
Log in to write reviews