
ಬೆಂಗಳೂರು: ಆಟವಾಡಲು ಹೋದಾಗ ಗೇಟ್ ಬಿದ್ದು ಬಾಲಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದತ್ತಾತ್ರೇಯ ವಾರ್ಡ್‌ನ ಸಹಾಯಕ ಎಂಜಿನಿಯರ್ ಟಿ .ಶ್ರೀನಿವಾಸ ರಾಜು ಅವರನ್ನು ಅಮಾನತುಗೊಳಿಸಲಾಗಿದೆ. ಮಹಾನಗರ ಪಾಲಿಕೆ ಉಪಯುಕ್ತ ಅಡಳಿತ ವಿಭಾಗ ತಕ್ಷಣವೇ ಜಾರಿಗೆ ಬರುವಂತೆ ಅದೇಶ ಹೊರಡಿಸಿದೆ. ಕರ್ತವ್ಯ ನಿರ್ಲಕ್ಷ್ಯ, ಗೇಟ್ ಸಾಮರ್ಥ್ಯಕ್ಕೆ ತಕ್ಕಂತೆ ಕೀಲುಗಳನ್ನು ಅಳವಡಿಸಿಲ್ಲ, ಸರಿಯಾದ ಸಮಯಕ್ಕೆ ನಿರ್ವಹಣೆ ಮಾಡದ್ದಕ್ಕೆ ಬಿಬಿಎಂಪಿ ಆಡಳಿತ ವಿಭಾಗದ ಉಪ ಅಯುಕ್ತರು ಅಮಾನತು ಮಾಡಿ ಅದೇಶ ಪ್ರಕಟಿಸಿದ್ದಾರೆ.
ಇನ್ನು ಘಟನೆ ಬಗ್ಗೆ ಮೂರು ದಿನಗಳಲ್ಲಿ ವಿವರಣೆ ನೀಡುವಂತೆ ಕಾರ್ಯಪಾಲಕ ಇಂಜಿನಿಯರ್ ವೆಂಕಟೇಶ್ ಅವರಿಗೆ ನೋಟಿಸ್ ನೀಡಲಾಗಿದೆ.
Poll (Public Option)

Post a comment
Log in to write reviews