
ಬೆಂಗಳೂರು: ನಗರದ ಅಂಜನಾಪುರದಲ್ಲಿ ಡೆಂಗ್ಯೂವಿನಿಂದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಮೃತ ಬಾಲಕ ಗಗನ್ (11) ಎಂದು ಗುರುತಿಸಲಾಗಿದೆ. ಬಾಲಕನಿಗೆ ಕಳೆದ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ತಪಾಸಣೆ ನಡೆಸಿದ್ದ ವೇಳೆ ಡೆಂಗ್ಯೂ ಇರುವುದು ಪತ್ತೆಯಾಗಿತ್ತು. ಬಳಿಕ ಆತನಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ತಡರಾತ್ರಿ ಬಾಲಕ ಮೃತಪಟ್ಟಿದ್ದಾನೆ. ಬಾಲಕ ಜಂಬೂಸವಾರಿ ದಿಣ್ಣೆಯ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದು, ಸದ್ಯ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Poll (Public Option)

Post a comment
Log in to write reviews