
ಸ್ಮಶಾನದಲ್ಲಿ ನಿರ್ಮಾಣವಾಗುತ್ತಿದ್ದ ಇಂದಿರಾ ಕ್ಯಾಂಟೀನ್‌ಗೆ ಬ್ರೇಕ್
ಹುಬ್ಬಳ್ಳಿ: ಮಂಟೂರು ರಸ್ತೆಯ ಬಳಿ ಇದ್ದ ಸ್ಮಶಾನದಲ್ಲಿ ಸದ್ದಿಲ್ಲದೆ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗುತ್ತಿದ್ದು, ಕೂಡಲೇ ಎಚ್ಚೆತ್ತುಕೊಂಡ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬ್ರೇಕ್ ಹಾಕಿ ಬೆರೆ ಸ್ಥಳಕ್ಕೆ ಕ್ಯಾಂಟೀನ್ ಸ್ಥಳಾಂತರ ಮಾಡಿದೆ.
ರಾತ್ರೋರಾತ್ರಿ ಕಾಂಪೌಂಡ್ ಹೊಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿತ್ತು. ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ಬೇಡವೆಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ತಿಂಗಳ 26ರಂದು ಶ್ರೀರಾಮಸೇನೆ ಮತ್ತು ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಮತ್ತು ಹೋರಾಟ ಸಮಿತಿಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿತ್ತು . ಅಲ್ಲದೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೂ ಇಂದಿರಾ ಕ್ಯಾಂಟೀನ್ ಕಾರಣವಾಗಿತ್ತು. ಇದರಿಂದಾಗಿ ಎಚ್ಚೆತ್ತುಕೊಂಡ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸ್ಮಶಾನದಲ್ಲಿ ನಿರ್ಮಾಣವಾಗುತ್ತಿದ್ದ ಕ್ಯಾಂಟೀನ್‌ಗೆ ಬ್ರೇಕ್ ಕೊಟ್ಟು ಬೇರೆಡೆಗೆ ಸ್ಥಳಾಂತರಿಸಿದೆ.
Poll (Public Option)

Post a comment
Log in to write reviews