
ಜಾರ್ಖಂಡ್ : ಬುಡಕಟ್ಟು ಯುವಕನನ್ನು ಪ್ರೀತಿಸಿದ್ದಕ್ಕೆ, ಸ್ವಂತ ತಂಗಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಅಮಾನವೀಯ ಘಟನೆ ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ನಡೆದಿದೆ. ಸೆಹ್ದಾ ಗ್ರಾಮದ ಬಳಿಯ ಅರಣ್ಯಕ್ಕೆ ಎಳೆದೊಯ್ದು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಯುವತಿಯು ತಾನು ಪ್ರೀತಿಸಿದ ಯುವಕನ ಜತೆಗೆ ಇದ್ದ ಸಮಯದಲ್ಲಿ ಸಹೋದರರು ಆಕೆಯನ್ನು ಹಿಡಿದು ಥಳಿಸಿದ್ದಾರೆ. ನಂತರ ಅಲ್ಲಿಂದ ಸೆಹ್ದಾ ಗ್ರಾಮದ ಬಳಿಯ ಅರಣ್ಯಕ್ಕೆ ಎಳೆದೊಯ್ದು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಸದರ್ ಪೊಲೀಸ್ ಠಾಣೆಯ ಉಸ್ತುವಾರಿ ಬಿಪಿನ್ ಕುಮಾರ್ ಹೇಳಿದ್ದಾರೆ. ಇಬ್ಬರು ಆರೋಪಿಗಳು ಕೂಡ ಈಗ ಪರಾರಿಯಾಗಿದ್ದಾರೆ.
ಈ ಬಗ್ಗೆ ಯುವತಿಯ ಹಳ್ಳಿ ಜನರು ಈ ಬಗ್ಗೆ ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಯುವಕನ ವಿಚಾರಣೆ ನಡೆಸಲಾಗುತ್ತಿದೆ. ಇನ್ನು ತಲೆಮರೆಸಿಕೊಂಡಿರುವ ಸಹೋದರರ ಪತ್ತೆಗೆ ಶೋಧಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Poll (Public Option)

Post a comment
Log in to write reviews