
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಂಗಲ್ ಹನುಮಂತಯ್ಯ ಪ್ರಶಸ್ತಿಗೆ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಆಯ್ಕೆ ಮಾಡಿದೆ.
ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಮೂರು ಬಾರಿ ವಿರೋಧ ಪಕ್ಷದ ನಾಯಕರಾಗಿ ರಾಜಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿರುವ ಯಡಿಯೂರಪ್ಪನವರು ಅವರು ತಮ್ಮ ಅಧಿಕಾರವಧಿಯಲ್ಲಿ ಕನ್ನಡ ನಾಡು-ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಪರಿಗಣಿಸಿ 2023 ನೇ ಸಾಲಿನ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ತಿಳಿಸಿದ್ದಾರೆ.
ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಕಸಾಪದ ಡಾ.ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗ ಶೆಟ್ಟಿ, ಟಿ.ತಿಮ್ಮೇಶ್ ಭಾಗವಹಿಸಿದ್ದರು. ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯ, ಕಲೆ, ಪರಂಪರೆ ಪೋಷಕರಾಗಿ ಈ ಕ್ಷೇತ್ರಗಳಲ್ಲಿ ಕನಿಷ್ಠ 25 ವರ್ಷಗಳಿಂದ ನಿರಂತರ ಸೇವೆ ಮಾಡುತ್ತಾ 50 ವರ್ಷ ಮೀರಿದ ವ್ಯಕ್ತಿ, ಸಂಘ-ಸಂಸ್ಥೆಗಳನ್ನು ಆಯ್ಕೆ ಮಾಡುವುದು ದತ್ತಿ ನಿಧಿಯ ಆಶಯವಾಗಿದೆ.
Poll (Public Option)

Post a comment
Log in to write reviews