
ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಿಐಡಿ ಮುಂದೆ ಹಾಜರಾಗಲಿದ್ದಾರೆ.
ಪ್ರಕರಣ ಸಂಬಂಧ ಬಂಧಿಸುವಂತಿಲ್ಲ ಎಂದು ನ್ಯಾಯಾಲಯ ಷರತ್ತುಬದ್ದ ಆದೇಶ ನೀಡಿತ್ತು. ಇದರ ಗಡುವು ಮುಕ್ತಾಯವಾಗಿದ್ದು, ಇಂದು ಬಿಎಸ್‌ವೈ ಸಿಐಡಿ ಮುಂದೆ ಹಾಜರಾಗಲಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ, ಕೇಸ್ಗೆ ಹೆದರಿ ಓಡಿ ಹೋಗುವುದಿಲ್ಲ. ಪ್ರಕರಣ ಸಂಬಂಧ ಅಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದಿದ್ದಾರೆ.
ಪ್ರಕರಣದ ಹಿನ್ನಲೆ
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ 3 ತಿಂಗಳ ಹಿಂದೆ ದಾಖಲಾಗಿದ್ದ ಪೋಕ್ಸೋ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಸಿಐಡಿ ನೋಟಿಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಬಿಎಸ್‌ವೈ ಕೋರ್ಟ್ ಮೆಟ್ಟಿಲೇರಿದ್ದರು.
ಈ ಪ್ರಕರಣದ ಕುರಿತು ಪೊಲೀಸ್ ಯಾವುದೇ ನೋಟಿಸ್ ನೀಡಿಲ್ಲ ಎಂದು ಸಂತ್ರಸ್ತೆಯ ಸಹೋದರ ಕೂಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಯಾವುದೋ ಸಹಾಯಕ್ಕಾಗಿ ಯಡಿಯೂರಪ್ಪ ಮನೆಗೆ ತೆರಳಿದ್ದ ಸಂದರ್ಭದಲ್ಲಿ ತನ್ನ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್ ತಿಂಗಳಲ್ಲಿ ದೂರು ದಾಖಲಿಸಿದ್ದರು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ದೂರು ನೀಡಿದ್ದರು. ಆದರೆ ಆ ಮಹಿಳೆ ಮೇ 26 ರಂದು ಮೃತಪಟ್ಟಿದ್ದರು.
ಮಹಿಳೆಯ ಸಹೋದರ ಸಲ್ಲಿಸಿದ್ದ ಅರ್ಜಿಯಲ್ಲಿ, ಆರೋಪಿ ಯಡಿಯೂರಪ್ಪಗೆ ಯಾವುದೇ ನೋಟಿಸ್ ನೀಡಿಲ್ಲ, ಅವರ ನಿವಾಸದ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಅಥವಾ ಪೋಕ್ಸೋ ಕಾಯ್ದೆಯ ಸೆಕ್ಷನ್ 41 ಎ ಅಡಿಯಲ್ಲಿ ಬಿಜೆಪಿಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ದೂರುದಾರರು ತಿಳಿಸಿದ್ದರು. ಫೋಕ್ಸೋ ಪ್ರಕರಣದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಆದರೆ ಮೂರು ತಿಂಗಳಾದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಬಿಎಸ್‌ವೈ ಹಾಜರಾಗಿರಲಿಲ್ಲ .
Poll (Public Option)

Post a comment
Log in to write reviews