
ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತ ಪಟ್ಟವರ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಪರಿಶೀಲನೆ ಬಳಿಕ ಮಾಧ್ಯಮರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ತರ ಅಕ್ರಮ ಕಟ್ಟಡಗಳನ್ನು ಕಟ್ಟಿ ಅನಾಹುತ ಸಂಭವಿಸಿದರೆ ಸತ್ತವರಿಗೆ ಹೊಣೆ ಯಾರು? ಅವ್ನು ಎಲ್ಲಿ ಕಮಿಷನರ್ ಎಂದು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, ಇನ್ಮುಂದೆ ಯಾವುದೇ ಅಕ್ರಮ ಕಟ್ಟಡ ಕಟ್ಟುವಂತಿಲ್ಲ ಎಂದು ತಾಕೀತು ಮಾಡಿದರು.
ಇನ್ನೂ ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬದವರಿಗೆ ಕಾರ್ಮಿಕ ಇಲಾಖೆಯಿಂದ 2 ಲಕ್ಷ ರೂಪಾಯಿ, ಬಿಬಿಎಂಪಿಯಿಂದ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. 6 ಮಂದಿ ಗಾಯಗೊಂಡಿದ್ದು, ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು. ಪರಿಹಾರ ನೀಡಿರುವುದು ಅವರ ಜೀವಕ್ಕೆ ಸಮವಲ್ಲ. ಜೀವಕ್ಕೆ ಬೆಲೆ ಕಟ್ಟಲಾಗದು. ಆದರೂ ಮೃತರೆಲ್ಲ ಕೂಲಿ ಕಾರ್ಮಿಕರು. ಅವರನ್ನು ನಂಬಿಕೊಂಡವರಿಗೆ ನೆರವು ನೀಡಬೇಕಿದೆ. ಮೃತದೇಹವನ್ನು ಅವರ ಊರಿಗೆ ಕೊಂಡೊಯ್ಯಲೂ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
Poll (Public Option)

Post a comment
Log in to write reviews