
ಉತ್ತರಕನ್ನಡ: ಭಟ್ಕಳದಿಂದ ಬೆಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ಆರ್‌ಟಿಸಿ (KSRTC) ಡಿಪೋ ಬಳಿ ಇಂದು (ಆಗಸ್ಟ್ 06) ಬೆಳಿಗ್ಗೆ ಸಂಭವಿಸಿದೆ.
ಇಂದು ಬೆಳ್ಳಿಗೆ 7.45ಕ್ಕೆ ಭಟ್ಕಳದಿಂದ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್, ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ ಆರ್ ಟಿಸಿ ಡಿಪೋ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ಬಸ್ ಚಾಲಕ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಚಾಲಕರ ಸಮಯಪ್ರಜ್ಞೆಯಿಂದ ಪ್ರಯಾಣಿಕರಿಗೆ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಲಿಲ್ಲ ಎಂದು ಭಟ್ಕಳ ಡಿಪೋ ಮೆನೇಜರ್ ಮಾಹಿತಿ ನೀಡಿದ್ದಾರೆ. ಸಾರಿಗೆ ಬಸ್ ಶೇಕಡಾ 80 ರಷ್ಟು ಸಂಪೂರ್ಣ ವಾಗಿ ಸುಟ್ಟು ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.
Poll (Public Option)

Post a comment
Log in to write reviews