ಟಾಪ್ 10 ನ್ಯೂಸ್
ಮನಸ್ಸಿಗೆ ಬಂದಂಗೆ ವಾಹನ ಚಾಲನೆ ಮಾಡಿದ್ರೆ ಶಿಕ್ಷೆ ಕಟ್ಟಿಟ್ಟ ಬುತ್ತಿ: ಹೈಕೋರ್ಟ್

ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣರಾಗುವವರಿಗೆ ಕನಿಷ್ಠ ಶಿಕ್ಷೆ ವಿಧಿಸಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಪಘಾತ ಪ್ರಕರಣದಲ್ಲಿ ಶಿಕ್ಷೆಯನ್ನು ಖಚಿತಪಡಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಸಂತೋಷ್ ಸಲ್ಲಿಸಿದ್ದ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಅಜಾಗರೂಕತೆಯಿಂದ ಆಂಬುಲೆನ್ಸ್ ಚಲಾಯಿಸಿ ಮತ್ತೊಂದು ಕಾರಿನ ಚಾಲಕನ ಸಾವಿಗೆ ಕಾರಣವಾಗಿರುವ ಸಂತೋಷ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಆರು ತಿಂಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸಲು ನ್ಯಾಯಪೀಠ ನಿರಾಕರಿಸಿದೆ.
ಅಪಘಾತ ಪ್ರಕರಣಗಳ ಅಪರಾಧಿಗಳಿಗೆ ಶಿಕ್ಷೆ ವಿಧಿಸದೇ ಹೋದರ ಮನುಷ್ಯನ ಜೀವಕ್ಕೆ ಬೆಲೆಯೇ ಇಲ್ಲದಂತಾಗಲಿದೆ' ಎಂದು ನ್ಯಾಯಪೀಠ ಹೇಳಿದೆ.
Tags:
Poll (Public Option)

Post a comment
Log in to write reviews