2024-12-24 06:37:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್​ವರೆಗೆ ಸುರಂಗ ಮಾರ್ಗ, ಆಕಾಶ ಗೋಪುರ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸುರಂಗ ಮಾರ್ಗ ನಿರ್ಮಾಣ, ನಗರದಲ್ಲಿ 250 ಅಡಿ ಎತ್ತರದ ಆಕಾಶ ಗೋಪುರ (sky deck) ನಿರ್ಮಾಣ, ಹೊಸದಾಗಿ 52 ಇಂದಿರಾ ಕ್ಯಾಂಟೀನ್​ಗಳ ಸ್ಥಾಪನೆ ಸೇರಿದಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ" ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

"ನಗರದ ಹೆಬ್ಬಾಳ ಮೇಲ್ಸೇತುವೆ (ಎಸ್ಟೀಮ್ ಮಾಲ್) ಪ್ರದೇಶದಿಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್​ನ ಮೇಲ್ಸೇತುವೆವರೆಗೆ ಸುರಂಗ ಮಾರ್ಗವನ್ನು 12,690 ಕೋಟಿ ರೂ. ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗಿದೆ. ಅದೇ ರೀತಿ ಬೆಂಗಳೂರು ನಗರದಲ್ಲಿ 250 ಅಡಿ ಎತ್ತರದ ಆಕಾಶ ಗೋಪುರವನ್ನು 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಒಪ್ಪಿಗೆ ನೀಡಲಾಗಿದೆ. ಆದರೆ, ಜಾಗದ ಬಗ್ಗೆ ಇನ್ನೂ ಅಂತಿಮಗೊಂಡಿಲ್ಲ" ಎಂದು ಹೇಳಿದರು.

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೂತನವಾಗಿ 52 ಇಂದಿರಾ ಕ್ಯಾಂಟೀನ್​ಗಳನ್ನು ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅದೇ ರೀತಿ ಸಾಂಪ್ರದಾಯಿಕ ಬೀದಿದೀಪಗಳ ನಿರ್ವಹಣೆಯನ್ನು 'ಇಂಧನ ಉಳಿತಾಯ -ಇಎಂಐ/ ವಾರ್ಷಿಕ ಪಾವತಿ ಮಾದರಿ ' ಕೇಂದ್ರೀಕೃತ ನಿಯಂತ್ರಣ ಮತ್ತು ಮೇಲ್ವಿಚಾರಣಾ ವ್ಯವಸ್ಥೆ ಯೋಜನೆ ಅಡಿಯಲ್ಲಿ ಎಲ್​ಇಡಿ ಬೀದಿದೀಪಗಳನ್ನು ಅಳವಡಿಸುವ ಹಾಗೂ 7 ವರ್ಷಗಳ ನಿರ್ವಹಣಾ ವೆಚ್ಚ 684.34 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ. ಹೊಂಬೆಳಕು ಯೋಜನೆಯಡಿ 50 ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು 25 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಒಪ್ಪಿಗೆ ನೀಡಿದ್ದು, ಪ್ರಸ್ತುತ ವರ್ಷದಲ್ಲಿ 10 ಕೋಟಿ ರೂ.ಗಳಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ" ಎಂದು ಸಚಿವರು ವಿವರಿಸಿದರು.

ಕ್ಯಾಬಿನೆಟ್ನಲ್ಲಿ ಅನುಮೋದನೆಗೊಂಡ ಇತರ ವಿಷಯಗಳು: ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024 ಕ್ಕೆ ಅನುಮೋದನೆ. ಬಾಲ ಗರ್ಭಿಣಿಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ವಿವಿಧ ಇಲಾಖೆಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸುವುದು. 592 ಅಂಗನವಾಡಿ ಕೇಂದ್ರಗಳನ್ನು 85 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಿರ್ಮಿಸುವ ಬಗ್ಗೆ ಒಪ್ಪಿಗೆ. ಮೆ.ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿ. (ಮೆ.ಮೈಸೂರು ಮಿನರಲ್ಸ್ ಲಿ.) ಸಂಸ್ಥೆಯ ಗ್ರೂಪ್ ಎ ಮತ್ತು ಬಿ ವೃಂದದ ಅಧಿಕಾರಿಗಳಿಗೆ 4ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಸಾರ 1998, ಏ.1 ರಿಂದ 2005 ರ ಸೆ.30 ರವರೆಗಿನ ಅವಧಿಗೆ ವೇತನ ಬಾಕಿ, ಬಡ್ಡಿ ಇತ್ಯಾದಿಗಳನ್ನು ಪಾವತಿಸುವುದು. ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ (ತಿದ್ದುಪಡಿ) ನಿಯಮಗಳು, 2024 ಕ್ಕೆ ಅನುಮೋದನೆ ನೀಡಲಾಗಿದೆ.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್ ಎಂಇ) ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಕೇಂದ್ರ ಸರ್ಕಾರದ (ಆರ್ ಎಎಂಪಿ) ಕಾರ್ಯಕ್ರಮವನ್ನು (ಕೇಂದ್ರದ ಪಾಲು 118.72 ಕೋಟಿ ರೂ., ರಾಜ್ಯದ ಪಾಲು 29.25 ಕೋಟಿ ರೂ.) ರಾಜ್ಯದಲ್ಲಿ 147.87 ಕೋಟಿ ರೂ.ಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ.

ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ಲೀಸ್ ಕಂ ಸೇಲ್ ಆಧಾರದ ಮೇಲೆ ಹಂಚಿಕೆಯಾದ ಮಳಿಗೆ ಮತ್ತು ನಿವೇಶನಗಳ ಕ್ರಯಪತ್ರ ನೀಡುವ ಕನಿಷ್ಠ ಕಾಲಾವಧಿಗೆ 10 ವರ್ಷಗಳಿಂದ 2 ವರ್ಷಗಳಿಗೆ ಇಳಿಸಲು ಒಪ್ಪಿಗೆ ನೀಡಲಾಗಿದೆ.

ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಸೇವೆ (ನೇಮಕಾತಿ) (ತಿದ್ದುಪಡಿ) ನಿಯಮಗಳು 2024ಕ್ಕೆ ಅನುಮೋದನೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲುಕಿನ ತೋರಣಗಲ್ಲು ಮತ್ತು ಕುರೇಕುಪ್ಪ ಗ್ರಾಮಗಳಲ್ಲಿನ 2000.58 ಎಕರೆ ಹಾಗೂ ತೋರಣಗಲ್ಲು, ಮುಸೇನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿನ 1666.73 ಎಕರೆ ಭೂಮಿಯನ್ನು ಮೆ. Jsw ಸ್ಟೀಲ್ ಲಿ. ಸಂಸ್ಥೆಯ ಪರವಾಗಿ ಶುದ್ಧ ಕ್ರಯಪತ್ರಗಳನ್ನು ನೀಡಲು ಅನುಮೋದನೆ. ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಬೆಂಗಳೂರು ನಬಾರ್ಡ್ ಮೂಲಕ ಪನರ್ಧನ ಪಡೆಯಲು 1600 ಕೋಟಿ ರೂ.ಗಳಿಗೆ ರಾಜ್ಯ ಸರ್ಕಾರದ ಖಾತರಿಯನ್ನು ವಿಸ್ತರಿಸಿ 29.07.2024 ರಂದು ಹೊರಡಿಸಿರುವ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.

ಕೆಎಎಸ್ ಅಧಿಕಾರಿ ರಾಜಮ್ಮ ಎ.ಚೌಡರೆಡ್ಡಿ ವಿರುದ್ಧ ಲೋಕಾಯುಕ್ತ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆಯಲ್ಲಿ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತರ ಶಿಫಾರಸ್ಸಿನಂತೆ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲು ಸಂಪುಟ ಒಪ್ಪಿಗೆ ನೀಡಲಾಗಿದೆ. ಕೆಎಎಸ್ ಅಧಿಕಾರಿಗಳಾದ ಹೆಚ್.ಎಸ್. ಅರುಣ ಪ್ರಭ, ಡಾ.ಎನ್.ಸಿ. ವೆಂಕಟರಾಜು ಹಾಗೂ ಹರೀಶ್ ನಾಯಕ್ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ರ ಪ್ರಕರಣ 12(3) ರಡಿ ಉಪಲೋಕಾಯುಕ್ತರು ಇಲಾಖಾ ವಿಚಾರಣೆ ಕೋರಿ ಸಲ್ಲಿಸಿರುವ ವರದಿಯ ಬಗ್ಗೆ ಒಪ್ಪಿಗೆ ನೀಡಲಾಗಿದೆ.

ರಾಜ್ಯದಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಹೆಲ್ತ್ ಮಿಷನ್ ಹಾಗೂ ಆರೋಗ್ಯ ಇಲಾಖೆಯ ಇತರೆ ಎಲ್ಲಾ ಆರೋಗ್ಯ ಸಂಬಂಧಿತ ಡಿಜಿಟಲ್ ಉಪಕ್ರಮಗಳ ಅನುಷ್ಠಾನನದ ಉದ್ದೇಶಕ್ಕಾಗಿ ಕರ್ನಾಟಕ ಸೊಸೈಟಿಗಳ ನೋಂದಣಿ ಕಾಯ್ದೆ, 1960ರ ಅಡಿಯಲ್ಲಿ ಕರ್ನಾಟಕ ಡಿಜಿಟಲ್ ಹೆಲ್ತ್ ಸೊಸೈಟಿ ಅನ್ನು ಸ್ಥಾಪಿಸಿ ನೋಂದಣಿ ಮಾಡುವ ಬಗ್ಗೆ ಅನುಮೋದನೆ. ಕರ್ನಾಟಕ ಸಿವಿಲ್ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) (2ನೇ ತಿದ್ದುಪಡಿ ನಿಯಮಗಳು 2024ಕ್ಕೆ ಅನುಮೋದನೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ತಾಂತ್ರಿಕ ಶಿಕ್ಷಣ ಇಲಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು, 2024ಕ್ಕೆ ಅನುಮೋದನೆ ನೀಡಲಾಗಿದೆ.

ಕರ್ನಾಟಕ ಪ್ರದೇಶ ಕುರುಬರ ಸಂಘ, ಕಲಬುರಗಿ ಶಾಖೆ ಇವರು ಕಲಬುರಗಿಯ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಈ ಕಾಲೇಜಿಗೆ ಸೇರಿದ 3-07 ಎಕರೆ/ಗುಂಟೆ ಜಮೀನನ್ನು ಮಂಜೂರು ಮಾಡಲು ಒಪ್ಪಿಗೆ. ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ಮತಕ್ಷೇತ್ರದ ತಾಳಿಕೋಟೆ ಪಟ್ಟಣಕ್ಕೆ ಸಂಪರ್ಕಿಸುವ ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿ-61ರ ಸರಪಳಿ 58.00 ಮತ್ತು 58.10 ಕಿ.ಮೀ ನಲ್ಲಿ ಸೇತುವೆ ಪುನ‌ರ್ ನಿರ್ಮಾಣ ಕಾಮಗಾರಿಯನ್ನು ರೂ.28.00 ಕೋಟಿಗಳ ಅಂದಾಜು ಮೊತ್ತದಲ್ಲಿ KRDCL ವತಿಯಿಂದ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

 

 

Post a comment

No Reviews