
ಒಟ್ಟಾವಾ: ಕೆನಡಾದ ಟೊರೊಂಟೊ ಬಳಿ ನಾಲ್ವರು ಭಾರತೀಯರು ಪ್ರಯಾಣಿಸುತ್ತಿದ್ದ ಟೆಸ್ಲಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿ ಉರಿದು ನಾಲ್ವರು ಭಾರತೀಯರು ಸಾವಿಗೀಡಾಗಿದ್ದಾರೆ ಅವರು ಪ್ರಯಾಣಿಸುತ್ತಿದ್ದ ಟೆಸ್ಲಾ ಸ್ವಯಂ ಚಾಲನಾ ಮಾದರಿಯದ್ದೇ ಎಂಬುದು ತಿಳಿದು ಬಂದಿಲ್ಲ.
ಮೃತಪಟ್ಟವರಲ್ಲಿ ಗುಜರಾತ್‌ನ ಗೋಧ್ರಾ ಮೂಲದ ಕೇತಾ ಗೋಹಿಲ್ (30) ಮತ್ತು ನಿಲ್ ಗೋಹಿಲ್ (26) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇವರ ಇಬ್ಬರು ಸ್ನೇಹಿತರು ಸಹ ಸಾವಿಗೀಡಾಗಿದ್ದಾರೆ. ಕಾರಿನಲಿದ್ದ ಓರ್ವ ಮಹಿಳೆಯನ್ನು ಬೇರೆ ವಾಹನದಲ್ಲಿದ್ದ ಪ್ರಯಾಣಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆ ಪ್ರಾಣಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ. ಅಪಘಾತದಲ್ಲಿ ಸಿಲುಕಿದವರನ್ನು ರಕ್ಷಿಸಲು ಹಲವಾರು ಜನ ತಮ್ಮ ಕಾರುಗಳು ನಿಲ್ಲಿಸಿ ಅಪಘಾತಕ್ಕೀಡಾದ ಕಾರಿನ ಗಾಜುಗಳನ್ನು ಒಡೆದಿದ್ದಾರೆ. ಅಷ್ಟರಲ್ಲಾಗಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
Poll (Public Option)

Post a comment
Log in to write reviews