
ತುಮಕೂರು: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ 7 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಈ ಘಟನೆ ನಡೆದಿದೆ. ಶಾಲಿನಿ (7) ಮೃತ ದುರ್ದೈವಿ. ಬಸವೇಶ್ (16) ಎಂಬ ಬಾಲಕನಿಗೆ ಗಂಭೀರ ಗಾಯವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ಮಲ್ಲಿಕಾರ್ಜುನ್ (51) ಎಂಬುವವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ.
ಡಿವೈಡರ್‌ಗೆ ಹುಂಡೈ ವೆನ್ಯು ಕಾರು ರಸ್ತೆ ಬದಿಯಲ್ಲಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಛಿದ್ರಗೊಂಡಿದೆ. ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews