2024-12-24 07:32:34

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮರಕ್ಕೆ ಕಾರು ಡಿಕ್ಕಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಕೋಲಾರ : ವೇಗವಾಗಿ ಬಂದ ಆಡಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಕಾರ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ‌ಸಹಕಾರ ನಗರದ ಬಳಿ ನಡೆದಿದೆ.

ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಇನ್ನೂ ಈ ಘಟನೆಯಲ್ಲಿ  ಬಂಗಾರಪೇಟೆಯ ಸಾಯಿ ಗಗನ್‌ ಎಂಬಾತ ಬಚಾವ್‌ ಆಗಿದ್ದಾರೆ ಎನ್ನಲಾಗಿದೆ.

ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ. ಕೆಲಸದ ನಿಮಿತ್ತ ಸ್ನೇಹಿತರೆಲ್ಲ ಕೋಲಾರಕ್ಕೆ ಹೋಗುವಾಗ ಈ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.  ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಿಸಿದ್ದಾರೆ.

Post a comment

No Reviews