
ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಡಿಕೇರಿ ಬೆಟ್ಟಗೇರಿ ಮುಖ್ಯರಸ್ತೆಯ ತಳೂರು ಜಂಕ್ಷನ್ ಬಳಿ ಭಾನುವಾರ ನಡೆದಿದೆ.
ಭಾಗಮಂಡಲ ಕಡೆಯಿಂದ ಮಡಿಕೇರಿ ಕಡೆಗೆ ಟಿ.ನರಸೀಪುರದ ನಿವಾಸಿ ನಾಗೇಂದ್ರ ಎಂಬುವವರು ಚಲಾಯಿಸುತಿದ್ದಕಾರು ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಗೇಂದ್ರ ಹಾಗೂ ಅವರ ಪತ್ನಿ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಬಹುತೇಕ ರಸ್ತೆಗಳಲ್ಲಿ ಗುಂಡಿಗಳಾಗಿದ್ದು, ಅದರಲ್ಲೂ ದಕ್ಷಿಣ ಕೊಡಗಿನ ಭಾಗದ ರಾಜ್ಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಸೋದ್ಯಮ ಜಿಲ್ಲೆಯಾದ ಕೊಡಗಿಗೆ ಹಲವಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದು, ಗುಂಡಿ ತಪ್ಪಿಸಲು ಹೋಗಿ ಹಲವರು ಅಪಘಾತಕೀಡಾಗಿದ್ದಾರೆ.
Poll (Public Option)

Post a comment
Log in to write reviews