
ಹಾವೇರಿ: ತಿರುಪತಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನಪ್ಪಿ, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಹಾವೇರಿ ಪಟ್ಟಣ ಅಶ್ವಿನಿ ನಗರದ ನಿವಾಸಿಗಳಾದ 45 ವರ್ಷದ ಸುರೇಶ್, 22 ವರ್ಷದ ಐಶ್ವರ್ಯ, 28 ವರ್ಷದ ಪ್ರಮೀಳಾ ಹಾಗೂ 7 ವರ್ಷದ ಚೇತನ ಮೃತಪಟ್ಟ ದುರ್ದೈವಿಗಳು.
ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹಾವೇರಿಯಿಂದ ಕಾರಿನಲ್ಲಿ ತೆರಳುತ್ತಿದ್ದಾಗ ಗುರುವಾರ ರಾತ್ರಿ ತಾಲೂಕಿನ ಹಲಗೇರಿ ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೆ ಮೃತ ಹಾಗೂ ಗಾಯಗೊಂಡಿರುವ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Poll (Public Option)

Post a comment
Log in to write reviews