2024-09-19 04:56:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಿಕ್ಕಬಳ್ಳಾಪುರದಲ್ಲಿ ಸರಣಿ ಕಳ್ಳತನ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಿಕ್ಕಬಳ್ಳಾಪುರ : ಸೂಪರ್ ಮಾರ್ಕೆಟ್ ಸೇರಿದಂತೆ 5 ಅಂಗಡಿಗಳಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಹಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾದ ಘಟನೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ನಲ್ಲಿ ನಡೆದಿದೆ. ಕಳ್ಳತನ ಮಾಡಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಖದೀಮರು ಸೂಪರ್ ಮಾರ್ಕೆಟ್, ಮೊಬೈಲ್ ಅಂಗಡಿ, ತರಕಾರಿ ಅಂಗಡಿ, ಕಾಂಡಿಮೆಂಟ್, ಕೆನರಾ ಬ್ಯಾಂಕ್ ಮಿತ್ರ ಕೇಂದ್ರದಲ್ಲಿ ಕಳ್ಳತನ ಮಾಡಿದ್ದಾರೆ. ಅಂಗಡಿಗಳ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಹಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಗುಡಿಬಂಡೆ ಠಾಣೆ ಪೊಲೀಸರು, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a comment

No Reviews