
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕೋರಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಸೋಮವಾರ (ಜೂನ್ 10)ರಿಂದ ಆರಂಭವಾಗಿದೆ. ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ವೈದ್ಯಕೀಯ ತಪಾಸಣೆ ನಡೆಯುತ್ತಿದ್ದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಚಾಲನೆ ನೀಡಿದರು.
ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಯಿಂದ ಬಂದಿದ್ದ ಆರು ಮಂದಿ ಮೂಳೆ ರೋಗ ಮತ್ತು ಕಣ್ಣು,ಮೂಗು,ಕಿವಿ ತಜ್ಞ ವೈದ್ಯರು ಅಭ್ಯರ್ಥಿಗಳನ್ನು ತಪಾಸಣೆ ಮಾಡಿ, ದಾಖಲೆಗಳನ್ನು ಪರಿಶೀಲಿಸಿದರು. ಒಟ್ಟು 783 ಮಂದಿ ಅಭ್ಯರ್ಥಿಗಳು ವಿಕಲಚೇತನರ ಕೋಟಾದಲ್ಲಿ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ್ದು ಜೂನ್ 12ವರೆಗೆ ತಪಾಸಣೆ ನಡೆಸಲಾಗುತ್ತದೆ. ಮೊದಲ ದಿನ 250 ಮಂದಿಗೆ ಬರಲು ಸೂಚಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದರು.
ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ಸಮಸ್ಯೆ ಇರುವವರ ತಪಾಸಣೆ ನಡೆಯುತ್ತಿದ್ದು, ಅಲ್ಲಿಗೆ ಕೆಇಎ ಸಿಬ್ಬಂದಿಯೇ ವಾಹನದಲ್ಲಿ ಕರೆದೊಯ್ಯುವ ಕೆಲಸ ಮಾಡುತ್ತಿದೆ.
ಬೇಕಾಗಿರುವ ಅಗತ್ಯ ದಾಖಲೆಗಳು.
ಯುಜಿಸಿಇಟಿ ಅರ್ಜಿಯ ಪ್ರತಿ,
ಪ್ರವೇಶ ಪತ್ರ,
ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ,
ವೈದ್ಯಕೀಯ ಪ್ರಮಾಣಪತ್ರ,
ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ.
ಇವುಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು ಎಂದು ಕೆಇಎ ತಿಳಿಸಿದೆ.
Poll (Public Option)

Post a comment
Log in to write reviews