
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸಂತ್ರಸ್ತ ಮಹಿಳೆಯರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದು ಅಪರಾಧ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿರುವುದು ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಸೆಕ್ಷನ್ ಇದ್ದರೆ ಹೇಳಲಿ ಎಂದು ಪ್ರಶ್ನಿಸಿದ್ದರು. ಅದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೆಕ್ಷನ್ ಗಳ ಸಮೇತ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಸೆಕ್ಷನ್ ಗಳ ಮಾಹಿತಿಯುಳ್ಳ ಎಸ್ಐಟಿ ಪತ್ರಿಕಾ ಹೇಳಿಕೆಯನ್ನು ಟ್ಯಾಗ್ ಮಾಡಿ ಸಿಎಂ ಕಾಲೆಳೆದಿದ್ದಾರೆ.
ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ಎಂದು ಕಿಡಿ
ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವೇ ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ ನೀಡುತಿದ್ದೀರಿ ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ.
ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ. "ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ" ಎಂದು ನನಗೆ ಪ್ರಶ್ನೆ ಮಾಡಿದ್ದೀರಿ ಎಂದು ಸಿಎಂಗೆ ಟಾಂಗ್ ಕೊಟ್ಟಿದ್ದಾರೆ.
ದಯಮಾಡಿ ವಕೀಲಿಕೆ ಮಾಡಬೇಡಿ
ನೀವು ಸ್ವಯಂಘೋಷಿತ ಸಂವಿಧಾನ ತಜ್ಞರು! ಪ್ರ(ಕು)ಖ್ಯಾತ ಮಾಜಿ ವಕೀಲರು!! ಹಾಲಿ ಮುಖ್ಯಮಂತ್ರಿಗಳು. ಆದರೂ ನಿಮ್ಮ ಪ್ರಶ್ನೆಗೆ ಉತ್ತರ ಕೊಡುವುದು ನನ್ನ ಧರ್ಮ. ಆದರೆ, ನಿಮಗೆ ಈ ಪರಿ ಅಜ್ಞಾನವೇ ಎನ್ನುವುದು ನನಗೆ ಸೋಜಿಗ. ಮಾತೆತ್ತಿದರೆ, 'ನಾನು ಲಾಯರ್ ಗಿರಿ ಮಾಡ್ತಾ ಇದ್ದೆ. ಸುಮ್ಕೆ ಕೂತ್ಕಳಿ' ಎಂದು ಎಲ್ಲರ ಬಾಯಿ ಮುಚ್ಚಿಸುತ್ತಿದ್ದ ನೀವು, ಈಗ ನೀವೇ ಬಾಯಿ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಅವರು ಲೇವಡಿ ಮಾಡಿದ್ದಾರೆ.
'ದಯಮಾಡಿ ವಕೀಲಿಕೆ ಮಾಡಬೇಡಿ' ಕಾನೂನಿನ ಬಗ್ಗೆ ಸಾಸಿವೆ ಕಾಳಿನಷ್ಟು ತಿಳಿವಳಿಕೆ ಇಲ್ಲದವರೊಬ್ಬರು 'ನಾನೂ ವಕೀಲ.. ನಾನೂ ವಕೀಲಿಕೆ ಮಾಡ್ತಾ ಇದ್ದೆ' ಎಂದು ಹೇಳಿಕೊಳ್ಳುವುದು ಗೌರವಾನ್ವಿತ ವಕೀಲ ಸಮುದಾಯಕ್ಕೆ ಅಪಚಾರ ಮಾಡಬೇಡಿ ಎಂದರು.
ಎಸ್ ಐಟಿ ರೂಲ್ಸ್ ಗೊತ್ತಿಲ್ಲವೇ?
ತಾವು ಸರಕಾರ ನಡೆಸುತ್ತಿರುವಿರೋ ಅಥವಾ ವಿಧಾನಸೌಧವನ್ನು ಟೈಮ್ ಪಾಸ್ ಕ್ಲಬ್ ಮಾಡಿಕೊಂಡಿರುವಿರೋ..? ಎಂದು ಮಾಜಿ ಮುಖ್ಯಮಂತ್ರಿ ಅವರು ಕಿಡಿಕಾರಿದ್ದಾರೆ.
ನಿಮ್ಮ ಘನತವೇತ್ತ ಅವಗಾಹನೆಗೆ SIT ಹೊರಡಿಸಿರುವ ಪ್ರತಿಕಾ ಪ್ರಕಟಣೆಯನ್ನು ಇಲ್ಲಿ ಲಗತ್ತಿಸಿದ್ದೇನೆ. ದಯಮಾಡಿ ಓದಿಕೊಳ್ಳಿ, ಅರ್ಥ ಮಾಡಿಕೊಳ್ಳಿ.. ನೀವು ಕೇಳಿದ ಎಲ್ಲಾ ಸೆಕ್ಷನ್ ಗಳು ಅದರಲ್ಲಿಯೇ ಇವೆ. ಒಂದಲ್ಲಾ.. ಹತ್ತಾರು ಸಲ ಓದಿ ಮನನ ಮಾಡಿಕೊಳ್ಳಿ ಎಂದು ಅವರು ಸಲಹೆ ಮಾಡಿದ್ದಾರೆ.
Poll (Public Option)

Post a comment
Log in to write reviews