
ಹಾಸನ: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಭವಾನಿ ರೇವಣ್ಣ ಸೇರಿದಂತೆ 8 ಮಂದಿ ವಿರುದ್ಧ ಎಸ್‌ಐಟಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಗುರುವಾರ ಎಸ್‌ಐಟಿ ಪೊಲೀಸರು ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಸಿದ್ದು ಪ್ರಕರಣದಲ್ಲಿ ರೇವಣ್ಣನವರ ಅಣತಿಯ ಮೇರೆಗೇ ಸಂತ್ರಸ್ತೆಯನ್ನು ಅಪಹರಿಸಲಾಗಿದೆ. ಹಾಗೂ ಇದರಲ್ಲಿ ಭವಾನಿ ರೇವಣ್ಣರ ಪಾತ್ರವೂ ಇದೆ ಎಂದು ಉಲ್ಲೇಖಿಸಲಾಗಿದೆ.
ಭವಾನಿ ರೇವಣ್ಣ ಅವರು ಪ್ರಕರಣದ ಇಬ್ಬರು ಮಕ್ಕಳು ಆರೋಪಿಗಳಿಗೆ ನಿರಂತರವಾಗಿ ದೂರವಾಣಿ ಕರೆ ಮಾಡಿ ಸಂತ್ರಸ್ತೆಗೆ ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ. ರೇವಣ್ಣರ ಸೂಚನೆಯಿಂದಲೇ ಅಪಹರಣವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಇಬ್ಬರಿಗೂ ಮತ್ತೆ ಸಂಕಷ್ಟಗಳು ಎದುರಾಗುವ ಸಾಧ್ಯತೆಗಳು ನಿಚ್ಚಳವಾಗಿದೆ.
Poll (Public Option)

Post a comment
Log in to write reviews