
ರೂಪ ಡಿ.ಎನ್ ನಿರ್ಮಾಣದ ಹಾಗೂ ಆನಂದರಾಜ್ ಎಂ ನಿರ್ದೇಶಿಸಿರುವ ಶೆಫ್ ಚಿದಂಬರ ಜೂನ್ 14 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ರಮೇಶ್ ಅರವಿಂದ್ ಅವರು ಟ್ರೇಲರ್ ಬಿಡುಗಡೆ ಮಾಡಿದ್ದು, ಚಿತ್ರ ನೋಡುವ ಕಾತುರ ಹೆಚ್ಚಿಸಿದೆ. ಈ ಸಿನಿಮಾದಲ್ಲಿ ತಂಡದ ಶ್ರಮ ಕಾಣುತ್ತಿದೆ, ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
ಕೇವಲ 29 ದಿನಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಮೂರು ಹಾಡುಗಳಿರುವ ಚಿತ್ರದಲ್ಲಿಒಂದು ಹಾಡನ್ನು ಅನಿರುದ್ದ್ ಹಾಡಿದ್ದಾರೆ. ರೂಪ ಡಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಹಾಸ್ಯವಿದ್ದು ಪ್ರೇಕ್ಷಕರಿಗೂ ಸಿನಿಮಾ ಇಷ್ಟವಾಗಲಿದೆ ಎನ್ನುತ್ತಾರೆ ನಿರ್ದೇಶಕ ಆನಂದರಾಜ್.
ಚಿತ್ರದ ನಾಯಕನಾಗಿ ಅನಿರುದ್ದ್ ಮತ್ತು ನಾಯಕಿರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್ ಅವರು ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟ ಶಿವಮಣಿ ಅವರು ನಿರ್ದೇಶಕರೊಟ್ಟಿಗೆ ವಿಭಿನ್ನವಾಗಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಂಗೀತ ನಿರ್ದೇಶಕ ರಿತ್ವಿಕ್ ಮುರಳಿಧರ್, ಛಾಯಾಗ್ರಾಹಕ ಉದಯ್ ಲೀಲ, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಸಂಭಾಷಣೆ ಬರೆದಿರುವ ಗಣೇಶ್ ಪರಶುರಾಮ್ ಸೇರಿದಂತೆ ಮುಂತಾದ ತಂತ್ರಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Poll (Public Option)

Post a comment
Log in to write reviews