
ಕೋಲಾರ: ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಬುಧುವಾರ ಹುಂಡಿ ಎಣಿಕೆಯನ್ನು ಮಾಡಲಾಯಿತು.
ಪ್ರತಿ ವರ್ಷ ನಡೆಯುವ ಬ್ರಹ್ಮ ರಥೋತ್ಸವ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಪ್ರಸನ್ನ ವೆಂಕಟರಮಣಸ್ವಾಮಿಗೆ ತಮ್ಮ ಕಷ್ಟ ಕಾರ್ಪಣ್ಯವೆಲ್ಲಾ ದೂರಾಗುವಂತೆ ಪ್ರಾರ್ಥಿಸಿ ಶಕ್ತ್ಯಾನುಸಾರ ಕಾಣಿಕೆ ಹಾಕುತ್ತಾರೆ. ಹಾಗೆ ಈ ಬಾರಿ ಹುಂಡಿಯಲ್ಲಿ 40 ಲಕ್ಷದ 19 ಸಾವಿರದ 599 ರೂಪಾಯಿ ನಗದು ಹಾಗೂ 24 ಗ್ರಾಂ ಚಿನ್ನ, 129 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಆಂಧ್ರ ಪ್ರದೇಶದ ದೊಡ್ಡ ತಿರುಪತಿಯ ಹಾಗೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿರುವ ಚಿಕ್ಕತಿರುಪತಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯವು ಹೆಚ್ಚು ಪ್ರಸಿದ್ದಿ ಪಡೆದ ದೇವಾಲಯವಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಅನ್ನದಾನ ಹುಂಡಿ ಎಣಿಕೆ ಕಾರ್ಯ ನಡೆಲಾಗುತ್ತಿದೆ. ಅದರಂತೆ ಈ ಬಾರಿಯೂ ಹುಂಡಿ ಎಣಿಕೆ ಕಾರ್ಯ ಮಾಡಲಾಗಿದೆ. ಪ್ರತಿ ವರ್ಷ ನಡೆಯುವ ಬ್ರಹ್ಮ ರಥೋತ್ಸವ ಸಮಯದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಸ್ವಾಮಿಯ ದರ್ಶನ ಪಡೆಯುತ್ತಾರೆ.
Poll (Public Option)

Post a comment
Log in to write reviews