2024-09-19 04:49:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಕ್ಕಳ ಮಾರಟ ಜಾಲ ಪೊಲೀಸರ ಬಲೆಗೆ

ತುಮಕೂರು : ಮಕ್ಕಳ ಮಾರಾಟ ಜಾಲವನ್ನು ತುಮಕೂರು ಪೊಲೀಸರು ಬೇಧಿಸಿದ್ದು ಪ್ರಕರಣದಲ್ಲಿ ಭಾಗಿಯಾಗಿದ್ದ 6 ಆರೋಪಿಗಳನ್ನು ಬಂಧಿಸಿದ್ದಾರೆ. 
ತುಮಕೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಮ್ಯಾನೇಜರ್ ಮಹೇಶ್ (39), ಆಸ್ಪತ್ರೆಯ ಸ್ಟಾಪ್ ನರ್ಸ್‌ಗಳಾದ ಪೂರ್ಣಿಮಾ (39) ಹಾಗೂ ಸೌಜನ್ಯ (48), ಚಿಕ್ಕನಾಯಕನಹಳ್ಳಿ ಮೂಲದ ಫಾರ್ಮಸಿಸ್ಟ್‌ ಮಹಬೂಬ್ ಷರೀಪ್ (52), ಟ್ಯಾಟೋ ಹಾಕುತ್ತಿದ್ದ ಕೆ.ಎನ್. ರಾಮಕೃಷ್ಣಪ್ಪ (53), ಹನುಮಂತರಾಜು (45) ಬಂಧಿತ ಆರೋಪಿಗಳು. ಬಂಧಿತರಿಂದ 1 ಕಾರು, 50 ಸಾವಿರ ನಗದು, 4 ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜೂ.9ರಂದು ಗುಬ್ಬಿ ಪಟ್ಟಣದಲ್ಲಿ 11 ತಿಂಗಳ ರಾಕಿ ಎಂಬ ಗಂಡು ಮಗು ಅಪಹರಣವಾಗಿತ್ತು. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಗುವಿನ ಅಪಹರಣ ಪ್ರಕರಣ ಬೆನ್ನತ್ತಿದ್ದ ಪೊಲೀಸರಿಗೆ ಒಂದೇ ಗ್ಯಾಂಗ್‌ನಿಂದ 9 ಮಕ್ಕಳನ್ನು ಮಾರಾಟ ಮಾಡಿರುವ ಮಾಹಿತಿ ದೊರೆತಿದೆ. ಈ ಮಾಹಿತಿ ಆಧರಿಸಿ ಆರೋಪಿಗಳನ್ನು ಬೆನ್ನತ್ತಿದ ಪೊಲೀಸರಿಗೆ ಇದೊಂದು ಮಕ್ಕಳ ಮಾರಾಟ ಜಾಲ ಎಂದು ತಿಳಿದಿದೆ. ಬಳಿಕ ಈ ಜಾಲದಲ್ಲಿ ತುಮಕೂರಿನ ಖಾಸಗಿ ಆಸ್ಪತ್ರೆ ಸಿಬ್ಬಂದಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರತಿದೆ.
ಆರೋಪಿಗಳು ಜಾಲದಲ್ಲಿ ಭಾಗಿಯಾಗಿದ್ದಾರೆ ಎಂದು ಖಚಿತವಾಗುತ್ತಿದ್ದಂತೆ, ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ತಾವು ಮಾಡುತ್ತಿದ್ದ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಆರೋಪಿಗಳು ವಿವಾಹ ಪೂರ್ವ ಗರ್ಭಧರಿಸಿದ, ಅಕ್ರಮ ಸಂಬಂಧದಿಂದ ಜನಿಸಿದ ಮಕ್ಕಳನ್ನು ಮಾರಾಟ ಮಾಡುತ್ತಿದ್ದರು. ಅಲ್ಲದೆ ಬಡವರ ಮಕ್ಕಳನ್ನು ಅಪಹರಿಸಿ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಮಧುಗಿರಿಯ ಗೊಲ್ಲಹಳ್ಳಿ, ದಾವಣಗೆರೆ ಮತ್ತು ಮಂಡ್ಯ ಸೇರಿದಂತೆ ಹಲವು ಕಡೆ ಮಕ್ಕಳನ್ನು ಮಾರಾಟ ಮಾಡಿದ್ದರು.
ಸದ್ಯ 9 ಮಕ್ಕಳ ಪೈಕಿ 4 ಮಕ್ಕಳನ್ನು ದತ್ತು ಸ್ವೀಕಾರ ಕೇಂದ್ರದಲ್ಲಿ ಇರಿಸಲಾಗಿದೆ. ಮಾರಾಟವಾಗಿದ್ದ ಒಂದು ಮಗು ಮರಳಿ ಪೋಷಕರ ಮಡಿಲು ಸೇರಿದೆ.

Post a comment

No Reviews