
ತುಮಕೂರು: ಆಂಬ್ಯುಲೆನ್ಸ್ ಇಲ್ಲದೇ ಮೃತದೇಹವನ್ನು ಬೈಕ್ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿದೆ.
ಆಂಬ್ಯುಲೆನ್ಸ್ ಇಲ್ಲದೇ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್ನಲ್ಲೇ ಸಾಗಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿದೆ.
ಬಳಿಕ ಮೃತರನ್ನು ಮನೆಗೆ ಸಾಗಿಸಲು ಆಂಬ್ಯುಲೆನ್ಸ್ ಸಿಬ್ಬಂದಿ ಮೃತದೇಹವನ್ನು ಆಂಬ್ಯುಲೆನ್ಸ್ನಲ್ಲಿ ಸಾಗಿಸುವಂತಿಲ್ಲ ಎಂದಿದ್ದಾರೆ. ಕೈಯಲ್ಲಿ ಹಣವಿಲ್ಲದೇ ಕೊನೆಗೆ ಹೊನ್ನೂರಪ್ಪ ಮಕ್ಕಳು ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಮನೆ ಹೋಗಿದ್ದಾರೆ.
Poll (Public Option)

Post a comment
Log in to write reviews