
ಮೈಸೂರು: ಮೃತ ಪತ್ರಕರ್ತರೊಬ್ಬರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಎರಡು ಲಕ್ಷ ರೂಪಾಯಿ ನೆರವು ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯ ಪಟ್ಟಣದ ಹಿರಿಯ ಪತ್ರಕರ್ತ ಟಿ.ಜಿ.ಹೇಮಕುಮಾರ್ ನಿಧನದಿಂದ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಇದನ್ನರಿತ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಗಮನಕ್ಕೆ ತಂದಿದ್ದರು. ಪ್ರಭಾಕರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಪರಿಹಾರ ಕೋರಿದ್ದರು. ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ನೊಂದ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮಂಜೂರು ಮಾಡಿದ್ದಾರೆ.
ಮೃತ ಪತ್ರಕರ್ತ ಟಿ.ಜಿ.ಹೇಮಕುಮಾರ್ ಜ್ಞಾನ ದೀಪ, ಜನಮಿತ್ರ, ಹಾಸನಮಿತ್ರ, ನಾಡಸಹ್ಯಾದ್ರಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ನಿರ್ವಹಿಸಿದ್ದರು. ತಂದೆ ಹೇಮಕುಮಾರ್ ಮಡಿದ ಬಳಿಕ ಪುತ್ರಿ ವಿದ್ಯಾ ಕುಟುಂಬ ನಿರ್ವಹಣೆ ಹೊಣೆ ಹೊತ್ತಿದ್ರು. ತಾಯಿಯನ್ನು ನೋಡಿಕೊಳ್ಳಲು ಅಪ್ಪನ ಕಾಯಕವನ್ನೇ ಮುಂದುವರಿಸಿದ್ದರು. ಸಿಎಂ ನೆರವಿನಿಂದ ಸಂಕಷ್ಟದಲ್ಲಿದ್ದ ಕುಟುಂಬ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಸಹಕರಿಸಿದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೃತಜ್ಞತೆ ಸಲ್ಲಿಸಿದೆ.
Poll (Public Option)

Post a comment
Log in to write reviews