
ಬೆಂಗಳೂರು: ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
IGST ನಕಾರಾತ್ಮಕ ಸೆಟಲ್ ಮೆಂಟ್ ಆಗುವ ಕಡೆ ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು ಕೆಲಸ ಮರು ಹಂಚಿಕೆ 2017ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲ್ಮನವಿಗಳು ದಾಖಲಾಗುತ್ತಿದ್ದು, ಇವುಗಳ ವಿಲೇವಾರಿಗಾಗಿ ಹೆಚ್ಚುವರಿ ಜಂಟಿ ಆಯುಕ್ತರ ಹುದ್ದೆ ಮಂಜೂರಾಗಿದ್ದು ಜುಲೈ 1 ರಿಂದ ಜಾರಿಗೆ ಬರಲಿದ್ದು ವೃತ್ತಿ ತೆರಿಗೆ ಸಂಗ್ರಹವನ್ನು ಚುರುಕುಗೊಳಿಸಲು ಗುರಿ ನಿಗಧಿ ಪಡಿಸಲು ಸೂಚನೆ ನೀಡಿದರು. ಅಂದಾಜು, ಜಾರಿ, ಮೇಲ್ಮನವಿ ಸಮನ್ವಯ ಸಭೆ ತಿಂಗಳಿಗೆ 2 ಬಾರಿ ಕಡ್ಡಾಯವಾಗಿ ನಡೆಸಿ ಕಾರ್ಯತಂತ್ರ ಸಿದ್ದಪಡಿಸಬೇಕು. ಅಲ್ಲದೇ ಮೇಲ್ಮನವಿಗಳನ್ನು ಸಕಾಲದಲ್ಲಿ ಇತ್ಯರ್ಥ ಮಾಡಬೇಕು ಎಂದರು. ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ. ಆ ವೇಳೆಗೆ ಗುರಿ ತಲುಪಿರಬೇಕು ಎಂದು ವಾಣ್ಯಿಜ್ಯ ತೆರಿಗೆ ಇಲಾಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
Poll (Public Option)

Post a comment
Log in to write reviews