ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಮೃತಪಟ್ಟವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು. ಈ ಮರೀತಿಯ ಘಟನೆ ನಡೆಯಬಾರದಿತ್ತು. ವಿಚಾರ ತಿಳಿದು ಬಹಳ ನೋವಾಗಿದ್ದು ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಸುರಕ್ಷಿತವಾಗಿ ಅವರ ಮನೆಗೆ ಸೇರಿಸಬೇಕು. ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯ ಕ್ರಮವನ್ನು ತುರ್ತಾಗಿ ನಿರ್ವಹಿಸಬೇಕೆನ್ನುವ ಸೂಚನೆಯನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದಾರೆ.
Post a comment
Log in to write reviews