ಬೆಂಗಳೂರು: ಆಶ್ರಮ ಶಾಲೆಯ ಮಕ್ಕಳು, ಬಡವರು ಹಾಗೂ ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ವಿರುದ್ದ ಫುಲ್ ಗರಂ ಆಗಿದ್ದಾರೆ. ದಲಿತ ಬುಡಕಟ್ಟು ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್ ಗಳಿಗೆ ಇಷ್ಟೆಲ್ಲಾ ಹಣ ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ ಎಂದು ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು. ಜೊತೆಗೆ ನಿಯಮಿತವಾಗಿ ಹಾಸ್ಟೆಲ್ ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು ಹಾಗೂ ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
Post a comment
Log in to write reviews