
ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಮುಡಾದಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಪಾಲರ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ. ಈ ಬೆನ್ನಲೇ ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿ ಕರೆ ನೀಡಿದೆ.
ತನಿಖೆಗೆ ಹೈಕೋರ್ಟ್ ಅಸ್ತು ಹಿನ್ನೆಲೆ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಮೈಸೂರು ಬಿಜೆಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸ, ಜಿಲ್ಲಾಧ್ಯಕ್ಷರಾದ ಎಲ್.ನಾಗೇಂದ್ರ ಹಾಗೂ ಎಲ್‌ಆರ್.ಮಹದೇವಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ಸೇರಿದಂತೆ ಮತ್ತಿತ್ತರರು ಹಾಜರಿದ್ದರು.
Poll (Public Option)

Post a comment
Log in to write reviews