
ಮೈಸೂರು: ಮುಡಾ ಹಗರಣದ ಬಗ್ಗೆ ಪ್ರಸ್ತಾಪವಾದರೆ ಉತ್ತರ ಕೊಡುತ್ತೇನೆ ಆದರೆ, ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ಶೇ 50:50 ಅನುಪಾತದಡಿ ನಿವೇಶನ ಹಂಚಿಕೆ ಮಾಡದಂತೆ 2019ರಲ್ಲೇ ಆದೇಶಿಸಲಾಗಿದೆ. ಅದಾದ ಮೇಲೂ ಕೆಲವರಿಗೆ ನಿವೇಶನ ನೀಡಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ. ನನ್ನ ಪತ್ನಿಗೆ ಬದಲಿ ನಿವೇಶನ ಕೊಟ್ಟಿದ್ದನ್ನು ಬಿಜೆಪಿಯವರು ವಿವಾದ ಮಾಡುತ್ತಿದ್ದಾರೆ. ಅದು ವಿವಾದದ ವಿಷಯವೇ ಅಲ್ಲ, ಎಲ್ಲವೂ ಕಾನೂನು ಬದ್ಧವಾಗಿಯೇ ನಡೆದಿದೆ ಎಂದು ಸಮರ್ಥಿಸಿಕೊಂಡರು. ರಾಜಕಾರಣಕ್ಕಾಗಿ ಬಿಜೆಪಿಯವರು ಈ ವಿಷಯದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಿಎಂ ದೂರಿದರು.
Poll (Public Option)

Post a comment
Log in to write reviews