
ಬೆಂಗಳೂರು : ಕಳೆದ ಮೇ15 ರಂದು ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಬುದ್ಧ ಕೊಲೆ ಪ್ರಕರಣ ಗಂಭೀರ ಸ್ವರೂಪ ಪಡೆದಿದೆ. ಈ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಸಿಐಡಿ ತನಿಖೆಗೆ ವಹಿಸಿ ಮಹತ್ವದ ಸೂಚನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲಿಸಿರುವ ಮನವಿಯಲ್ಲಿ ಪ್ರಬುದ್ಧ ತಾಯಿ ಕೆ.ಆರ್.ಸೌಮ್ಯ ತನಿಖೆಯಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರ ಅಸಹಕಾರ, ಉದ್ದೇಶಪೂರ್ವಕ ನಿರ್ಲಕ್ಷತೆ, ಸಾಕ್ಷಿ ನಾಶ ಯತ್ನ ನಡೆದಿದೆ. ಸಂತ್ರಸ್ಥ ತಾಯಿಯಾದ ನನಗೂ ಬೆದರಿಕೆ ಹಾಕಲಾಗುತ್ತಿದೆ. ಹೀಗಾಗಿ ಸಿಐಡಿ ತನಿಖೆಗೆ ವಹಿಸಲು ಒತ್ತಾಯಿಸಿದ್ದರು. ಯುವತಿ ಪ್ರಬುದ್ಧ ತಾಯಿಯ ಮನವಿ ಹಿನ್ನೆಲೆಯಲ್ಲಿ ಕೊಲೆ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಸಿಐಡಿ ತನಿಖೆಗೆ ವಹಿಸಲು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಸೂಚನೆ ನೀಡಿದ್ದಾರೆ.
Poll (Public Option)

Post a comment
Log in to write reviews