
ಜೂನ್ 03: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಆರೋಪಿಸಿದಂತೆ ನಮಗೆ ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು.
ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಬಿಜೆಪಿ ನೀಡಿರುವ ಗಡುವು ಸಂಬಂಧ ಪ್ರತಿಕ್ರಿಯೆ ನೀಡಿದ ಸಿಎಂ ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದರು.
ನಮ್ಮ ಅಭ್ಯರ್ಥಿಗಳು ಗೆಲ್ಲಲು 19 ರಿಂದ 20 ಮತಗಳು ಅಗತ್ಯವಿದ್ದು, ಬಿಜೆಪಿಯವರು, ಜೆಡಿಎಸ್ ಅವರು ಒಬ್ಬರಿಗೆ ನಾಮಪತ್ರಗಳ ಪರಿಶೀಲನೆಯ ನಂತರ ತಿಳಿಯಲಿದೆ. ಒಂದು ವೇಳೆ ಜಾಸ್ತಿಯಾದರೆ ಚುನಾವಣೆ ನಡೆಯಬೇಕು. ಚುನಾವಣೆ ನಡೆದರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು.
ಸಮೀಕ್ಷೆ ನಂಬಲ್ಲ
ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ಈಗಾಗಲೇ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ. ಈ ಸಮೀಕ್ಷೆ ಸಂಪೂರ್ಣ ತಳ್ಳಿಹಾಕುತ್ತೇವೆ ಎಂದರು.
Poll (Public Option)

Post a comment
Log in to write reviews