ದೇಶದ ಅತಿ ಕಿರಿಯ ಸಂಸದ ಸಾಗರ್ ಖಂಡ್ರೆಗೆ ರಾಜಕೀಯ ರಹಸ್ಯ ತಿಳಿಸಿದ ಸಿಎಂ ಸಿದ್ದರಾಮಯ್ಯ .
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಗೆಲುವನ್ನು ಸಾಧಿಸಿದ ಬೀದರ್ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಿರಿಯ ಅಭ್ಯರ್ಥಿ ಎಂದೇ ಖ್ಯಾತಿ ಪಡೆದಿದ್ದ ಸಾಗರ್ ಈಶ್ವರ್ ಖಂಡ್ರೆ ಬಹುಮತ ಪಡೆದು ಗೆಲುವು ಸಾಧಿಸಿದ್ದಾರೆ. ಸಾಗರ್ ಖಂಡ್ರೆ ಗೆಲುವನ್ನು ಸಂಭ್ರಮಿಸಲು ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಸಾಗರ್ ಖಂಡ್ರೆ ಅವರಿಗೆ ರಾಜಕೀಯದ ಹಲವು ರಹಸ್ಯಗಳನ್ನು ಸಿದ್ದರಾಮಯ್ಯ ತಿಳಿಸಿ ಹೇಳಿದ್ದಾರೆ.
ಅಷ್ಟೇ ಅಲ್ಲ,ಸದನದಲ್ಲಿ ಸದಾ ಹಾಜರಿದ್ದು, ಎಲ್ಲ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಶ್ರದ್ಧಯಿಂದ ಆಲಿಸಿ, ಸೂಕ್ತವಾಗಿ ಸ್ಪಂದಿಸುವವರು ಮಾತ್ರ ಉತ್ತಮ ಸಂಸದೀಯ ಪಟುವಾಗಿ ಬೆಳೆಯಲು ಸಾಧ್ಯ.ಸದನದಲ್ಲಿ ಸಂಸದರಾಗಿ ಹೇಗೆ ರಾಜ್ಯದ ಹಿತ ಕಾಯಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ರಂಥಾಲಯದ ಪ್ರಯೋಜನ ಪಡೆದು ಸದನದಲ್ಲಿ ಮುತ್ಸದ್ದಿ ರಾಜಕಾರಣಿಗಳು ಮಾಡಿರುವ ಭಾಷಣಗಳನ್ನು ಓದುವಂತೆಯೂ , ಬೀದರ್ ನಿಂದ ಸಂಸದರಾಗಿ ನೂತನವಾಗಿ ಆಯ್ಕೆಯಾಗಿರುವ ಸಾಗರ್ ಈಶ್ವರ ಖಂಡ್ರೆಗೆ ಕಿವಿಮಾತು ಹೇಳಿದ್ದಾರೆ.
Post a comment
Log in to write reviews