ಬೆಂಗಳೂರು: ಆಪತ್ಕಾಲಯಾನ ಸೇವೆ ಯೋಜನೆಯಡಿ ಲೋಕಾರ್ಪಣೆಯಾಗಿರುವ 65 ಅತ್ಯಾಧುನಿಕ ಆಂಬ್ಯುಲೆನ್ಸ್ ಗಳ ಸೇವೆಗಳು ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಸಹಕಾರಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನೂತನ ಅಂಬುಲೆನ್ಸ್‌ಗಳ ಸೇವೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮರೊಂದಿಗೆ ಮಾತನಾಡಿದ ಅವರು, 26 ಸುಧಾರಿತ ಹಾಗೂ 39 ಬೇಸಿಕ್ ಲೈಫ್ ಸಪೋರ್ಟ್ ಅಂಬ್ಯುಲೆನ್ಸ್‌ಗಳನ್ನು ಇಂದು ಜನರ ಸೇವೆಗೆ ಮುಕ್ತಗೊಳಿಸಲಾಗಿದ್ದು, ಇವುಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಿಗೆ ಕಳಿಸಲಾಗುವುದು ಎಂದು ಹೇಳಿದರು.
ಇನ್ನೂ ಇದೇ ವೇಳೆ ರಾಜ್ಯಪಾಲರು ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿಯವರು ಹಿಂದೆ ನಾಲ್ಕು ವರ್ಷ ಅವಧಿಯಲ್ಲಿದ್ದಾಗ ವಿಷಯವನ್ನು ಏಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ.ಟಿ.ರವಿಯವರು ರಾಜ್ಯಪಾಲರಿಗೆ ಈಗ ಪತ್ರ ಬರೆದಿದ್ದು, ಹಿಂದೆ ಅವರು ಸಚಿವರಾಗಿದ್ದಾಗ ಕ್ರಮವೇಕೆ ತೆಗೆದುಕೊಳ್ಳಲಿಲ್ಲ ಎಂದು ಮರುಪ್ರಶ್ನಿಸಿದರು. ರಾಜ್ಯಪಾಲರ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
Post a comment
Log in to write reviews