
ಬೆಂಗಳೂರು: ಬಿಜೆಪಿ ಹೂಡಿರುವ ಮಾನನಷ್ಟ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಧೀಶರ ಮಂದೆ ಶನಿವಾರ (ಇಂದು) ಹಾಜರಾಗಲಿದ್ದರೆ.
ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ದಿನಪತ್ರಿಕೆಗಳಲ್ಲಿ ನೀಡಿದ್ದ ಜಾಹಿರಾತು ಸಂಬಂಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಲ್ಲಿಸಿರುವ ಖಾಸಗಿ ಮಾನನಷ್ಟ ಪ್ರಕರಣ ಸಂಬಂಧ 42 ನೇ ವಿಶೇಷ ನ್ಯಾಯಾಲಯದ ಮುಂದೆ ಸಿಎಂ ಸಿದ್ದರಾಮಯ್ಯ ಹಾಜರಾಗಲಿದ್ದಾರೆ.
2019 ರಿಂದ 2023 ರವರೆಗೆ ಬಿಜೆಪಿ ಭ್ರಷ್ಟ ಆಡಳಿತ ನಡೆಸಿದೆ. ಆ ವೇಳೆಯಲ್ಲಿ ಸಿಎಂ ಹುದ್ದೆ 2500 ಕೋಟಿ , ಮಂತ್ರಿ ಹುದ್ದೆಗೆ 500 ಕೋಟಿ ರೂ.ಗಳನ್ನು ಬಿಜೆಪಿ ಹೈಕಮಾಂಡ್ಗೆ ನೀಡಿ ಹುದ್ದೆ ಸ್ವೀಕಾರ ಮಾಡಿದ್ದಾರೆ ಎಂದು ಜಾಹಿರಾತು ನೀಡಲಾಗಿತ್ತು.
ಇದಲ್ಲದೆ ಕೋವಿಡ್ ಕಿಟ್ ಪೂರೈಕ್ ಟೆಂಡರ್ನ ಡೀಲ್ಗಳಲ್ಲಿ ಶೇ.75, ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್ ನಲ್ಲಿ ಶೇ.40, ಮಠಕ್ಕೆ ನೀಡುವ ಅನುದಾನದ ಡೀಲ್ಗಳಲ್ಲಿ ಶೇ.30, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್ನಲ್ಲಿ ಶೇ.30, ರಸ್ತೆ ಕಾಮಗಾರಿ ಸೇರಿದಂತೆ ಇನ್ನಿತರ ಕಾಮಗಾರಿಗಳಲ್ಲಿ ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಿ ದಿನಪತ್ರಿಕೆಗಳಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಅವರ ಚಿತ್ರ ಸಹಿತ ಜಾಹಿರಾತು ನೀಡಲಾಗಿತ್ತು.
ಇದು ಚುನಾವಣಾ ಸಮಯದಲ್ಲಿ ಪಕ್ಷಕ್ಕೆ ಮಾಡಿರುವ ಅಪಮಾನ. ಹೀಗಾಗಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಕೇಶವ ಪ್ರಸಾದ್ ಅವರು ವಿಶೇಷ ನ್ಯಾಯಾಯಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣ ಸಂಬಂಧ ನ್ಯಾಯಾಲಯದ ಮುಂದೆ ಸಿಎಂ ಹಾಜರಾಗುತ್ತಿದ್ದಾರೆ.
Poll (Public Option)

Post a comment
Log in to write reviews