
ನರೇಂದ್ರ ಮೋದಿಯವರೇ ಈಗಲಾದರೂ ನೊಂದ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ. ಇಲ್ಲದಿದ್ದರೆ ನಿಮ್ಮ ಆತ್ಮಸಾಕ್ಷಿಯೂ ನಿಮ್ಮನ್ನು ಕ್ಷಮಿಸಲ್ಲಎಂದು ಸಿ.ಎಂ ಸಿದ್ದರಾಮಯ್ಯ ಮೋದಿ ವಿರುದ್ದ ಟ್ವೇಟ್ ಮೂಲಕ ವಾಗ್ದಾಳಿ ನಡೆಸಿದರು.
ಟ್ವೇಟ್‌ನಲ್ಲಿ ಏನಿದೆ.?
ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯೆ ಅಪಹರಣದ ಆರೋಪ ಪ್ರಕರಣವನ್ನು ವಿಶೇಷ ತನಿಖಾ ದಳದ ಮೂಲಕ ನಿಷ್ಪಕ್ಷಪಾತ, ಪಾರದರ್ಶಕ ತನಿಖೆಗೆ ಒಳಪಡಿಸಿ ನೊಂದವರ ಕಣ್ಣೀರು ಒರೆಸುವ ಪ್ರಯತ್ನವನ್ನು ಒಂದು ಸರ್ಕಾರವಾಗಿ ನಾವು ಮಾಡಿದ್ದೇವೆ.
ಮಹಿಳೆಯರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಪ್ರಧಾನಿ ನರೇಂದ್ರ ಮೋದಿಯವರೇ ಈಗ ನಿಮ್ಮ ಸರದಿ, ಮಹಿಳಾ ಕಾಳಜಿ ಬರೀ ನಿಮ್ಮ ಭಾಷಣಕ್ಕೆ ಸೀಮಿತವಲ್ಲ, ಕೃತಿಯಲ್ಲಿಯೂ ಇದೆ ಎನ್ನುವುದಾದರೆ ಬ್ರಿಜ್‌ಭೂಷಣ್ ಸಿಂಗ್, ಕುಲ್‌ದೀಪ್ ಸೆಂಗರ್ ರಂಥ ಮಹಿಳಾ ಪೀಡಕರು ಮಾಡಿರುವ ಪಾಪಕ್ಕೆ ತಕ್ಕ ಶಿಕ್ಷೆಯಾಗುವಂತೆ ಮಾಡಿ.
ಈಗಲಾದರೂ ನೊಂದ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ. ಇಲ್ಲದಿದ್ದರೆ ನಿಮ್ಮ ಆತ್ಮಸಾಕ್ಷಿಯೂ ನಿಮ್ಮನ್ನು ಕ್ಷಮಿಸಲಾರದು ಎಂದು ಟ್ವೇಟ್ ನಲ್ಲಿ ಬರೆದುಕೊಂಡಿದ್ದಾರೆ.
Poll (Public Option)

Post a comment
Log in to write reviews