ಭಾರತ
ತಿರುಪತಿ ಲಡ್ಡುವಿನಲ್ಲಿ ತುಪ್ಪದ ಗುಣಮಟ್ಟ ಪರೀಕ್ಷಿಸಲು ಸಮಿತಿ ರಚನೆ
ಆಂಧ್ರ ಪ್ರದೇಶ: ಗುಣಮಟ್ಟವಿಲ್ಲದ ಪದಾರ್ಥಗಳು ಹಾಗು ಪ್ರಾಣಿಗಳ ಕೊಬ್ಬನ್ನು ತಿರುಪತಿ ದೇವಾಲಯದಲ್ಲಿ ಲಡ್ಡು ತಯಾರಿಕೆಯಲ್ಲಿ ಬಳಸಲಾಗುತ್ತಿದೆ ಎಂದು ಆಂಧ್ರ ಪ್ರದೇಶದ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಸಮಿತಿಯನ್ನು ದೇವಸ್ಥಾನದ ಆಡಳಿತ ಮಂಡಳಿ ಸ್ಥಾಪಿಸಿದೆ.
ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿರುಮಲ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ. ಶ್ಯಾಮಲಾ ರಾವ್ ಗುರುವಾರ ತಿಳಿಸಿದ್ದಾರೆ.
ಟೆಂಡರ್‌ಗಳಲ್ಲಿ ಗುಣಮಟ್ಟದ ತುಪ್ಪವನ್ನು ಖರೀದಿಸಲು ಸೇರಿಸಬೇಕಾದ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ಸಮಿತಿಯು ಸಲಹೆ ನೀಡಲಿದೆ ಎಂದು ಹೇಳಿದರು. ಹಾಗೂ ಗುತ್ತಿಗೆದಾರರು ಕಲಬೆರಕೆ ಮತ್ತು ಕಡಿಮೆ ಗುಣಮಟ್ಟದ ತುಪ್ಪವನ್ನು ಸರಬರಾಜು ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Post a comment
Log in to write reviews