ಟಾಪ್ 10 ನ್ಯೂಸ್
ಬೆಲೆ ಏರಿಕೆ ಖಂಡಿಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ - ಬಿ.ವೈ.ವಿಜಯೇಂದ್ರ
ಬೆಂಗಳೂರು: ರಾಜ್ಯ ಸರ್ಕಾರ ಮಾಡಿದ ಹಾಲು ಮತ್ತು ತೈಲ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು (ಶುಕ್ರವಾರ ಜೂನ್ 28) ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್, ಡೀಸೆಲ್, ಹಾಲಿನ ಬೆಲೆ ಎಲ್ಲಾ ಹೆಚ್ಚಾಗಿದೆ .ಈ ಬಗ್ಗೆ ಮಾತಾಡಿದ್ರೆ ಉಡಾಫೆ ಮಾತನಾಡುತ್ತಾರೆ. ಕಾಂಗ್ರೆಸ್ ಆಡಳಿತದ ವಿರುದ್ಧ ಜನ ಬೇಸತ್ತಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷ ಬಗ್ಗೆ ವಿಶ್ವಾಸ ಕಡಿಮೆಯಾಗಿದೆ ಎಂದರು. ಹೀಗಾಗಿ ನಾಳೆ (ಶನಿವಾರ ಜೂನ್ 29) ಹಾಲಿನ ದರ ಏರಿಕೆ ಬಗ್ಗೆ ರೈತ ಮೋರ್ಚಾ ಹೋರಾಟ ಮಾಡುತ್ತಿದೆ. ಎಲ್ಲಾ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದರು. ಇದಕ್ಕೂ ಬಗ್ಗದಿದ್ದರೆ ಮುಂದೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಹೇಗೆ ಮಾಡಬೇಕು ಎಂಬುದು ನಮಗೆ ಗೊತ್ತಿದೆ ಎಂದು ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Post a comment
Log in to write reviews