
ಬಿಲ್ಡರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಒಡಿಶಾದ ಗಂಜಾಂ ಜಿಲ್ಲೆಯ ದಿಗಪಹಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಕಾ ಸುಜಿತ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈಷಮ್ಯದ ಹಿನ್ನೆಲೆಯಲ್ಲಿ ಬಿಲ್ಡರ್ ಸುಧನ್ಸು ಸಂಗ್ರಾಮ್ ಪಾಧಿ ಅವರ ಮೇಲೆ ಸುಜಿತ್ ಕುಮಾರ್ ಹಲ್ಲೆ ನಡೆಸಿದ್ದಾರೆ.ಬರ್ಹಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೂಡಲೇ ಸುಜಿತ್‌ರನ್ನು ಬಂಧಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುಜಿತ್ ಕುಮಾರ್ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಹಲ್ಲೆಗೆ ಹಳೆಯ ವೈಷಮ್ಯವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಸಂಗ್ರಾಮ್ ಪಾಧಿ ಸೇರಿದಂತೆ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಾರ್ಥಕ್ ಸಾರಂಗಿ ತಿಳಿಸಿದ್ದಾರೆ.
ಸುಜಿತ್ ಜತೆಗೆ ಆತನ ಸಹಾಯಕ ಅಮಿತ್‌ಕುಮಾರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Poll (Public Option)

Post a comment
Log in to write reviews