
ಹಣದ ಮೂಲಕ ಚುನಾವಣೆ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷದ ನಂಬಿಕೆಯನ್ನು ರಾಜ್ಯದ ಜನರು ಸುಳ್ಳು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕಂಟಕ ತಂದಿಟ್ಟಿದ್ದಾರೆ. ಒಳ್ಳೆಯ ಕೆಲಸ ಮಾತ್ರ ಮಾಡಲು ಮುಂದಾಗಿಲ್ಲ. ಯುವಕರ ಭವಿಷ್ಯಕ್ಕೆ ಮೋದಿ ಅವರು ರಾಷ್ಟೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಒಂದೇ ತಿಂಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ತೆಗೆದಿದ್ದಾರೆ. ಶಿಕ್ಷಣ ಸಚಿವರ ಕನ್ನಡದ ಬಗ್ಗೆ ಹಲವರು ಮಾತನಾಡಿದ್ದಾರೆ. ಶಿಕ್ಷಣ ಸಚಿವರಿಗೆ ಕನ್ನಡ ಬರಲೇಬೇಕಾ ಎಂದು ಬೇಕಿದ್ದಲ್ಲಿ ಸಿಎಂ ಸಮರ್ಥನೆ ಮಾಡಿಕೊಳ್ಳಬಹುದು. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತ ಎಂದು ಟೀಕಿಸಿದರು.
ಬಿಜೆಪಿ ಜೆಡಿಎಸ್ ಸಹಕಾರದಿಂದ ಯಶಸ್ವಿಯಾಗಿ ಲೋಕಸಭಾ ಚುನಾವಣೆ ಮುಗಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಒಟ್ಟಾಗಿ ಹೋಗಬೇಕು. ದೇಶದಲ್ಲಿ ಮೋದಿ ಮತ್ತೆ ಪ್ರಧಾನ ಮಂತ್ರಿಯಾಗಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಲೋಕಸಭೆಯಲ್ಲಿ ಯದುವೀರ್ ಪರವಾಗಿ ಬಿಜೆಪಿ ನಾಯಕರ ಜೊತೆಗೆ ಜೆಡಿಎಸ್ ನಾಯಕರು ಶ್ರಮಿಸಿದ್ದಾರೆ. ವಿಧಾನಪರಿಷತ್ ನ 6 ಕ್ಷೇತ್ರಗಳ ಪೈಕಿ ಬಿಜೆಪಿ ನಾಲ್ಕು, ಜೆಡಿಎಸ್ 2 ರಲ್ಲಿ ಸ್ಪರ್ಧೆ ಮಾಡಿದೆ. ಅವರು ಕೂಡ ವಿವೇಕಾನಂದರ ಪರವಾಗಿ ನಿಂತಿದ್ದಾರೆ. ನಾವು ಫಲಿತಾಂಶ ಎದುರು ನೋಡುತ್ತಿದ್ದೇವೆ. ಪಕ್ಷ ನಿರ್ಧಾರ ಮಾಡಿದ ಮೇಲೆ ಅವರಿಗೆ ನಾವು ದುಡಿಯಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
Poll (Public Option)

Post a comment
Log in to write reviews