2024-12-24 06:51:27

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಗ್ರೆಸ್ ಸರ್ಕಾರದ ಬೆಲೆಯೇರಿಕೆಯ ಬಾಂಬ್ ಕರ್ನಾಟಕದಲ್ಲಿ ಬ್ಲಾಸ್ಟ್ – ತೈಲ ಬೆಲೆ ಏರಿಕೆಗೆ ಭಾರೀ ವಿರೋಧ 

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ತೈಲಗಳ ಮೇಲಿನ ಸೆಸ್ ಹೆಚ್ಚಿದ್ದು, ತೈಲಬೆಲೆಯಲ್ಲಿ ಏರಿಕೆ ಉಂಟಾಗಿದ್ದು, ಇದರ ವಿರುದ್ಧ  ಜನಸಾಮಾನ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಆಕ್ರೋಶ ಹೊರಹಾಕಿರುವ ವಿಪಕ್ಷ ಬಿಜೆಪಿ, ಭಯೋತ್ಪಾದಕರು ಕುಕ್ಕರ್ನಲ್ಲಿ, ಹೋಟೆಲ್ನಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ ಹಾಗೆ ಕಾಂಗ್ರೆಸ್ ಸರ್ಕಾರ ಬೆಲೆಯೇರಿಕೆಯ ಬಾಂಬ್ ಅನ್ನು ಕರ್ನಾಟಕದಲ್ಲಿ ಬ್ಲಾಸ್ಟ್ ಮಾಡಿದೆ. ಮುದ್ರಾಂಕ ಶುಲ್ಕ, ಆಸ್ತಿ ತೆರಿಗೆ, ಬಸ್ ದರ, ದಿನಬಳಕೆ ವಸ್ತುಗಳ ದರ ಏರಿಸಿದ ಬಳಿಕ ಈಗ ಪೆಟ್ರೋಲ್ & ಡಿಸೇಲ್ ದರವನ್ನು ಏರಿಸಿ ಕನ್ನಡಿಗರನ್ನು ಇನ್ನಿಲ್ಲದ ಸಂಕಷ್ಟಕ್ಕೆ ದೂಡಿದೆ ಎಂದು ಟೀಕಿಸಿದೆ. 

ಇನ್ನು ಸಿಎಂ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಅರಾಜಕತೆ ಏರಿದಂತೆ, ವಸ್ತುಗಳ ಬೆಲೆ ಸಹ ಇನ್ನಿಲ್ಲದಂತೆ ಏರುತ್ತಿರುವುದು, ಅವರ ದುರ್ಬಲ ಹಾಗೂ ಭ್ರಷ್ಟ ಆಡಳಿತಕ್ಕೆ ಸಾಕ್ಷಿ. ಕಾಂಗ್ರೆಸ್ಸಿಗರೇ, ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ. ಕಾಂಗ್ರೆಸ್ ಪಕ್ಷ ಯಾವ ಭಾಗ್ಯವನ್ನೂ ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿ ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ. ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣೀ ರೂಪದಲ್ಲಿ ಏರಿಸುತ್ತಲೇ ಇದ್ದೀರಿ, ಇದೀಗ ಪೆಟ್ರೋಲ್ 3 ರೂ ಹಾಗೂ ಡೀಸೆಲ್ ಮೇಲೆ 3.50 ರೂ ದರಗಳನ್ನು ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳ ಕಂಡು ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ. ಬರಿದಾಗಿರುವ ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿರುವ ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಬಿಜೆಪಿ ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಜನಾಕ್ರೋಶವನ್ನು ಪ್ರತಿನಿಧಿಸಿ  ಬಿಜೆಪಿ ಬೀದಿಗಿಳಿದು ಹೋರಾಡಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ  ಬಿವೈ ವಿಜಯೇಂದ್ರ ಹೇಳಿದ್ದಾರೆ.

Post a comment

No Reviews