
ಬೆಂಗಳೂರು; ಕಾಂಗ್ರೆಸ್ ಸರ್ಕಾರ ಒಂದು ವರ್ಷದ ಅವದಿಯಲ್ಲಿ ಖಜಾನೆಯನನ್ನ ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದವರು ಮನೆಗೆ ಬರೋದು ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ ಎಂದು ಟೀಕಿಸಿದರು.
ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದುಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ ಮುಸ್ಲಿಮರು ಪೊಲೀಸ್ ಠಾಣೆಗೆ ಹೋಗಿ ಕಪಾಳಮೋಕ್ಷ ಮಾಡುವ ಸ್ಥಿತಿಯಿದೆ. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್ ಚಾಲೀಸ ಕೇಳಿದರೆ, ಜೈ ಶ್ರೀರಾಮ್ ಎಂದರೆ ಹಲ್ಲೆಯಾಗುತ್ತದೆ ಎಂದು ದೂರಿದರು.
ಒಂದು ವರ್ಷದಲ್ಲಿ ಮಗು ಅಂಬೆಗಾಲಿಡುತ್ತದೆ. ಆದರೆ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ. ರಸ್ತೆ, ನೀರಾವರಿ, ಸೇತುವೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಶಾಲೆ ಕಟ್ಟಡ ದುರಸ್ತಿಗೂ ಹಣವಿಲ್ಲ. ಬಸ್ ಚಾಲಕರಿಗೆ, ಆಂಬ್ಯುಲೆನ್ಸ್ ಚಾಲಕರಿಗೆ ಸಂಬಳವಿಲ್ಲ, ರೈತರಿಗೆ ಹಾಲಿನ ಪ್ರೋತ್ಸಾಹಧನ ಸಿಕ್ಕಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ವೆಂಟಿಲೇಟರ್‌ನಲ್ಲಿದೆ.
Poll (Public Option)

Post a comment
Log in to write reviews