
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸ್ ಪ್ರಕರಣಕ್ಕೆ ಬಿಜೆಪಿ ನಾಯಕ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಸರ್ಕಾರದ ನಡವಳಿಕೆ ಸಂದೇಹಾಸ್ಪದವಾಗಿದೆ. ಪ್ರಕರಣ ಸಂಬಂಧ ವಿಳಂಬ ಧೋರಣೆ ತೋರಿದ್ದ ಸರ್ಕಾರ ಈಗ ಇದ್ದಕ್ಕಿದ್ದಂತೆ ಚುರುಕಾಗಿರುವುದು ಅನುಮಾನಗಳನ್ನು ಹುಟ್ಟಿಸಿದೆ. ಸರ್ಕಾರದ ಈ ನಡೆಗೆ ಲೋಕಸಭಾ ಚುನಾವಣೆಯಲ್ಲಿನ ವೈಫಲ್ಯದ ಹತಾಶೆ ಕಾರಣವಾಗಿರಬಹುದು ಎಂದರು.
ದೂರುದಾರರ ಮಾನಸಿಕ ಸ್ಥಿತಿಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದ ಗೃಹ ಸಚಿವರ ಅಂದಿನ ಹೇಳಿಕೆಗೂ ಈಗ ಅವರು ಮಾತನಾಡುತ್ತಿರುವುದಕ್ಕೂ ಸಂಬಂಧವೇ ಇಲ್ಲ ಎಂದು ಸಿ.ಟಿ.ರವಿ ಹೇಳಿದ್ದಾರೆ.
Poll (Public Option)

Post a comment
Log in to write reviews