ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದಿದ್ದಾರೆ. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಪಿಎಸ್ಐ ಪರಶುರಾಮ್ ಅವರು ಡೆತ್ನೋಟ್ನಲ್ಲಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ಅವರ ಹೆಸರನ್ನು ಉಲ್ಲೇಖಿಸಿದರು.
ಮೃತ ಪಿಎಸ್ಐ ಪರಶುರಾಮ್ ಅವರ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ಇವರುಗಳ ವಿರುದ್ಧ ಜಾತಿ ನಿಂದನೆ, ಅಟ್ರಾಸಿಟಿ ಕಾಯ್ದೆ, ಅಡಿಯಲ್ಲಿ ದೂರು ದಾಖಲಾದರೂ ಸಹ ಇದುವರೆಗೂ ಅವರ ವಿಚಾರಣೆ ನಡೆದಿಲ್ಲ ಹಾಗೂ ಅವರನ್ನು ಬಂಧಿಸಿ ವಿಚಾರಣೆಯನ್ನು ನಡೆಸುವ ಕಾರ್ಯವು ಆಗಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೇ, ಪಿಎಸ್ಐ ಪರಶುರಾಮ ಅವರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದರು. ಆದರೆ ಇನ್ನೂವರೆಗೂ ಪರಿಹಾರ ನೀಡಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Post a comment
Log in to write reviews