ರಾಜಕೀಯ
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೈ ನಾಯಕರ ಪ್ರಕರಣ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಸದ್ಯಕ್ಕಿಲ್ಲ ರಿಲೀಫ್

ಬೆಂಗಳೂರು: ಅನುಮತಿ ಇಲ್ಲದೆಯೂ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರವಣೆಯನ್ನು ಸುಪ್ರೀಂಕೋರ್ಟ್ 6 ವಾರಗಳ ಕಾಲ ಮುಂದೂಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮತಿ ಇಲ್ಲದೆಯೂ ಪ್ರತಿಭಟನೆ ನಡೆಸಿದ್ದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ನಾಯಕರ ವಿರುದ್ಧ ಕೇಸ್ ದಾಖಲಾಗಿತ್ತು. ಹೀಗಾಗಿ ಪ್ರಕರಣ ರದ್ದು ಮಾಡುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ಗೆ ಇತ್ತೀಚೆಗೆ ಕೋರ್ಟ್ ಸಮನ್ಸ್ ನೀಡಿತ್ತು. ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.
Poll (Public Option)

Post a comment
Log in to write reviews